ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಸಿಲಿಕಾನ್ ಸಿಟಿಯ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸತತ ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ಅತಿ ಹೆಚ್ಚಿನ ವಾಹನ ದಟ್ಟಣೆ ಉಂಟಾಯಿತು.
ಯಲಹಂಕ, ಕೆ.ಆರ್ ಪುರ ಭಾಗಗಳಲ್ಲಿ ಕೆಲವು ಮನೆಗಳಿಗೆ ಮಳೆ ನೀರು ನುಗ್ಗಿತು. ಯಲಹಂಕದ ಚೌಡೇಶ್ವರಿ ಬಡಾವಣೆ, ವಿದ್ಯಾರಣ್ಯಪುರ, ಎಚ್ಎಎಚ್ ವಿಮಾನ ನಿಲ್ದಾಣದಲ್ಲಿ ಅತಿಹೆಚ್ಚು ಮಳೆಯಾಯಿತು. ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಮಳೆಯಲ್ಲೇ ಸಾಗಿದರು. ಕಚೇರಿಗಳಿಗೆ ಹೋಗಲು ನಾಗರಿಕರು ಪರದಾಡಿದರು.
ಹವಾಮಾನ ಇಲಾಖೆ ಬೆಂಗಳೂರಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಿದೆ. ಹೀಗಾಗಿ, ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಅ.16ರಂದು(ಬುಧವಾರ) ರಜೆ ಘೋಷಿಸಲಾಗಿದೆ. 17ರಂದು ವಾಲ್ಮೀಕಿ ಜಯಂತಿ ಇದ್ದು, ಅಂದು ಸರ್ಕಾರಿ ರಜೆ ಇರುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಜಿ ಜಗದೀಶ್ ತಿಳಿಸಿದ್ದಾರೆ.