ರಾಜ್ಯ

ಅಪ್ರತಿಮ ದೇಶಭಕ್ತ ಬೋಸ್:‌ ಸಿಎಂ

ಬೆಂಗಳೂರು: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು.

ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮ ದಿನ. ದೇಶದ ಬಗ್ಗೆ ಅಪಾರ ಗೌರವಾಭಿಮಾನ ಹೊಂದಿದ್ದ ಮಹಾನ್ ದೇಶಭಕ್ತ. ಈಗಿನ ಐಎಎಸ್ ನಂತೆ ಬ್ರಿಟೀಷರ ಕಾಲದಲ್ಲಿದ್ದ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಆದರೆ ತಮ್ಮ ಉಜ್ವಲ ಭವಿಷ್ಯವನ್ನು ತ್ಯಾಗ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಮೀಸಲಾಗಿಟ್ಟರು. ಎರಡು ಬಾರಿ ಕಾಂಗ್ರೆಸ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮಹಾತ್ಮಾ ಗಾಂಧಿಯವರು ಪ್ರತಿಪಾದಿಸುತ್ತಿದ್ದ ಸತ್ಯ ಹಾಗೂ ಅಹಿಂಸೆಯ ಮಾರ್ಗದಲ್ಲಿ ನಡೆದು ಭಾರತ ಸ್ವಾತಂತ್ರ್ಯ ಹೊಂದುವುದು ಕಷ್ಟಸಾಧ್ಯ ಎಂಬುದು ಸುಭಾಷರ ಅಭಿಪ್ರಾಯವಾಗಿತ್ತು. ಆದ್ದರಿಂದ ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟೀಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಐಎನ್ ಎ (ಇಂಡಿಯನ್ ನ್ಯಾಷನಲ್ ಆರ್ಮಿ)ಯನ್ನು ಸ್ಥಾಪಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ರ ಜನ್ಮದಿಂದು ಅವರ ಜೀವನ-ಸಾಧನೆಗಳನ್ನು ಸ್ಮರಿಸುವ ಜೊತೆಗೆ ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ. ಈ ದಿಸೆಯಲ್ಲಿ ಸರ್ಕಾರ ಈ ಮಹಾನ್ ನಾಯಕನಿಗೆ ಗೌರವ ಸಲ್ಲಿಸಿದೆ ಎಂದರು.

ದಾವೋಸ್ ಶೃಂಗಸಭೆ

ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಸಾಲಿನ ಆಯವ್ಯಯದ ಸಿದ್ಧತೆಯಲ್ಲಿ ತೊಡಗಿಕೊಳ್ಳ ಬೇಕಾಗಿರುವುದರಿಂದ 2025 ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ

ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಅವರನ್ನು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದರು.

ಬಿಜೆಪಿಯ ಆರೋಪಗಳು ರಾಜಕೀಯ ಪ್ರೇರಿತ

ಕಾರ್ಪೊರೇಶನ್ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಯರವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದರು.

ಲೋಕಾಯುಕ್ತದವರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಕುಟುಂಬದವರಿಗೆ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

58 mins ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

2 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

2 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

2 hours ago

ಡಿ.16 ರಂದು ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಭದ್ರತಾ ವ್ಯವಸ್ಥೆ ಪರಿಶೀಲನೆ

ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

2 hours ago

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

2 hours ago