Mysore
28
overcast clouds

Social Media

ಶನಿವಾರ, 21 ಮಾರ್ಚ್ 2026
Light
Dark

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಿಇಓಗಳಿಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಇರುವ ಸೌಲಭ್ಯಗಳನ್ನು ಪ್ರಚಾರ ಮಾಡುವ ಮೂಲಕ ದಾಖಲಾತಿ ಅಭಿಯಾನ ನಡೆಸುವಂತೆ ಮನವಿ ಮಾಡಲಾಗಿದೆ. ಡಿಸಿಗಳು ಮತ್ತು ಸಿಇಓ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

ಯಾವ ಮಗುವು ಶಿಕ್ಷಣದಿಂದ ವಂಚಿತವಾಗದಂತೆ ಜಿಲ್ಲಾದ್ಯಂತ ವ್ಯವಸ್ಥಿತವಾಗಿ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಬೇಕು. ಪ್ರತಿ ಗ್ರಾಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಕಾರದೊಂದಿಗೆ ಮನೆ ಮನೆಗೆ ಭೇಟಿ ನೀಡಿ, ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಲು ಮನವೊಲಿಸಬೇಕು. ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್‌ಗಳ ಮೂಲಕ ಶಾಲಾ ಅಭಿವೃದ್ಧಿ ಮತ್ತು ದಾಖಲಾತಿ ಹೆಚ್ಚಿಸುವಲ್ಲಿ ಅವರ ನೆರವು ಪಡೆಯಬೇಕು. ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಯಾವುದೇ ತರಗತಿಗಳಿಗೆ ದಾಖಲಾತಿ ಮಾಡಿಕೊಳ್ಳಬೇಕು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

Tags:
error: Content is protected !!