ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಿಇಓಗಳಿಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಇರುವ ಸೌಲಭ್ಯಗಳನ್ನು ಪ್ರಚಾರ ಮಾಡುವ ಮೂಲಕ ದಾಖಲಾತಿ ಅಭಿಯಾನ ನಡೆಸುವಂತೆ ಮನವಿ ಮಾಡಲಾಗಿದೆ. ಡಿಸಿಗಳು ಮತ್ತು ಸಿಇಓ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.
ಯಾವ ಮಗುವು ಶಿಕ್ಷಣದಿಂದ ವಂಚಿತವಾಗದಂತೆ ಜಿಲ್ಲಾದ್ಯಂತ ವ್ಯವಸ್ಥಿತವಾಗಿ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಬೇಕು. ಪ್ರತಿ ಗ್ರಾಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಕಾರದೊಂದಿಗೆ ಮನೆ ಮನೆಗೆ ಭೇಟಿ ನೀಡಿ, ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಲು ಮನವೊಲಿಸಬೇಕು. ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್‌ಗಳ ಮೂಲಕ ಶಾಲಾ ಅಭಿವೃದ್ಧಿ ಮತ್ತು ದಾಖಲಾತಿ ಹೆಚ್ಚಿಸುವಲ್ಲಿ ಅವರ ನೆರವು ಪಡೆಯಬೇಕು. ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಯಾವುದೇ ತರಗತಿಗಳಿಗೆ ದಾಖಲಾತಿ ಮಾಡಿಕೊಳ್ಳಬೇಕು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…