Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಅಪಘಾತದಲ್ಲಿ ಸಾವನಪ್ಪಿದವರಿಗೆ ನೀಡುವ ಪರಿಹಾರ ಮೊತ ಹೆಚ್ಚಳ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಕೆಎಸ್ ಆರ್ ಟಿಸಿಯಿಂದ ಪ್ರಯಾಣಿಸುವ ವೇಳೆ ಉಂಟಾಗುವಂತ ಬಸ್ ಅಪಘಾತ ಸಂದರ್ಭದಲ್ಲಿ ಸಾವನ್ನಪ್ಪುವಂತ ಸಾರ್ವಜನಿಕರಿಗೆ ನೀಡುತ್ತಿದ್ದಂತ ಪರಿಹಾರದ ಮೊತ್ತವನ್ನು ರೂ.3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ ಮಾಡಿ ಆದೇಶಿಸಲಾಗಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದ್ದುದೇಶವಾಗಿದೆ.

ಹೀಗಾಗಿ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು ರೂ.3,00,000/-(ರೂ.ಮೂರು ಲಕ್ಷ ಮಾತ್ರ) ದಿಂದ ರೂ.10,00,000/-(ರೂ.ಹತ್ತು ಲಕ್ಷ ಮಾತ್ರ) ಗಳಿಗೆ ದಿನಾಂಕ:01-01-2024 ರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ ಎಂದಿದ್ದಾರೆ.

ಮೃತರ ಅವಲಂಬಿತರಿಗೆ ಹೆಚ್ಚುವರಿ ಪರಿಹಾರ ಮೊತ್ತವನ್ನು ನೀಡುವ ಸಲುವಾಗಿ ರೂ.50.00 ರಿಂದ ರೂ.99.00 ರವರೆಗಿನ ಮುಖ ಬೆಲೆಯ ಟಿಕೇಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ರೂ.1.00 (ರೂ.ಒಂದು ಮಾತ್ರ) ಮತ್ತು ರೂ.100.00 ಹಾಗೂ ಹೆಚ್ಚಿನ ಬೆಲೆಯ ಟಿಕೇಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ರೂ.2.00 ರಂತೆ (ರೂ.ಎರಡು ಮಾತ್ರ) ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆಯನ್ನೂ ಸಹ ದಿನಾಂಕ:01-01-2024 ರಿಂದ ಆಕರಿಸಲಾಗುವುದು ಎಂದು ತಿಳಿಸಿದ್ದಾರೆ.

ಈ‌ ಹಿಂದೆ ರೂ.100 ಮುಖ ಬೆಲೆಯ ಟಿಕೇಟ್ ಪಡೆದು ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ರೂ.1.00 ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆ ಮಾಡಲಾಗುತ್ತಿತ್ತು. ರೂ.1.00 ರಿಂದ ರೂ.49.00 ರವರೆಗಿನ ಮುಖ ಬೆಲೆಯ ಟಿಕೇಟ್ ಪಡೆದು ಪ್ರಯಾಣಿಸುವ ಪ್ರಯಾಣಿಕರಿಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ ಎಂದಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ