Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಪ್ರಸಕ್ತ ಸಾಲಿನಲ್ಲಿ ರಾಜಸ್ವ ಸಂಗ್ರಹ ಹೆಚ್ಚಳ: ಕೃಷ್ಣ ಬೈರೇಗೌಡ

ಬೆಳಗಾವಿ: ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೂ ಸುಮಾರು 15,145.32 ಕೋಟಿ ರೂ.ಗಳಷ್ಟು ರಾಜಸ್ವ ಸಂಗ್ರಹಣೆಯಾಗಿದ್ದು, ಕಳೆದ ಸಾಲಿಗಿಂತ ಈ ಬಾರಿ ಅಧಿಕ ರಾಜಸ್ವ ಸಂಗ್ರಹಣೆಯಾಗಿದೆ ಎಂದು ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.

ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.18) ವಿಧಾನ ಪರಿಷತ್‌ ಸದಸ್ಯ ಶಶಿಲ್‌ ನಮೋಶಿ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಪ್ರಸಕ್ತ ಸಾಲಿನಲ್ಲಿ ರಾಜಸ್ವ ಸಂಗ್ರಹಣೆಯಲ್ಲಿ ಕಳೆದ ಸಾಲಿಗಿಂತ ಶೇ.20ರಷ್ಟು ಅಧಿಕ ಸಂಗ್ರಹದ ಗುರಿಯನ್ನಿಟ್ಟುಕೊಳ್ಳಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಭೌತಿಕ ಖಾತೆ ಬಳಸಿ ನೋಂದಣಿ ಮಾಡುತ್ತಿದ್ದ ವೇಳೆ ಸುಳ್ಳು ಗುರುತಿನ ಚೀಟಿ ಸೃಷ್ಟಿಸಿಕೊಂಡು, ಅಮಾಯಕರ ಆಸ್ತಿಗಳನ್ನು ಮತ್ತೊಬ್ಬರ ಹೆಸರಿಗೆ ನೋಂದಣಿ ಮಾಡಲಾಗುತ್ತಿದ್ದನ್ನು, ಸುಳ್ಳು ಪಿಐಡಿ ಸಂಖ್ಯೆ ಸೃಷ್ಟಿಸಿ ಸರ್ಕಾರಿ ಆಸ್ತಿ, ವಂಚನೆ ನೋಂದಣಿಗಳ ಪ್ರಕರಣಗಳನ್ನು ಹಾಗೂ ನೋಂದಣಿ ಹಾಗೂ ಮುದ್ರಾಂಕ ಶುಲ್ಕ ವಂಚನೆಯನ್ನು ಹಾಗೂ ಕಾನೂನು ಬದ್ಧವಲ್ಲದ ನೋಂದಣಿಗಳನ್ನು ತಡೆಗಟ್ಟಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಇ-ಖಾತಾ ಸಂಯೋಜನೆಯ ನಂತರ ಕಾನೂನು ಬಾಹಿರ ಹಾಗೂ ಬೊಟ್ಟಿ ದಾಖಲೆಗಳನ್ನು ಸೃಷ್ಟಿಸಿಕೊಂಡು ನೋಂದಣಿ ಮಾಡಿಸಿಕೊಳ್ಳುತ್ತಿದ್ದ ದಸ್ತಾವೇಜುಗಳ ಸಂಖ್ಯೆ ಕುಂಠಿತವಾಗಿದೆ. ಹೀಗಾಗಿ ಕಾನೂನು ಬದ್ಧವಾಗಿ ನೂಐಜವಾದ ಆಸ್ತಿ ನೋಂದಣಿಯಿಂದ ಸರ್ಕಾರಕ್ಕೆ ಯಾವುದೇ ಆದಾಯ ನಷ್ಟ ಉಂಟಾಗಿರುವುದಿಲ್ಲ ಎಂದು ಹೇಳಿದ್ದಾರೆ.

Tags: