ಬೆಳಗಾವಿ: ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೂ ಸುಮಾರು 15,145.32 ಕೋಟಿ ರೂ.ಗಳಷ್ಟು ರಾಜಸ್ವ ಸಂಗ್ರಹಣೆಯಾಗಿದ್ದು, ಕಳೆದ ಸಾಲಿಗಿಂತ ಈ ಬಾರಿ ಅಧಿಕ ರಾಜಸ್ವ ಸಂಗ್ರಹಣೆಯಾಗಿದೆ ಎಂದು ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.
ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್.18) ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಪ್ರಸಕ್ತ ಸಾಲಿನಲ್ಲಿ ರಾಜಸ್ವ ಸಂಗ್ರಹಣೆಯಲ್ಲಿ ಕಳೆದ ಸಾಲಿಗಿಂತ ಶೇ.20ರಷ್ಟು ಅಧಿಕ ಸಂಗ್ರಹದ ಗುರಿಯನ್ನಿಟ್ಟುಕೊಳ್ಳಲಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಭೌತಿಕ ಖಾತೆ ಬಳಸಿ ನೋಂದಣಿ ಮಾಡುತ್ತಿದ್ದ ವೇಳೆ ಸುಳ್ಳು ಗುರುತಿನ ಚೀಟಿ ಸೃಷ್ಟಿಸಿಕೊಂಡು, ಅಮಾಯಕರ ಆಸ್ತಿಗಳನ್ನು ಮತ್ತೊಬ್ಬರ ಹೆಸರಿಗೆ ನೋಂದಣಿ ಮಾಡಲಾಗುತ್ತಿದ್ದನ್ನು, ಸುಳ್ಳು ಪಿಐಡಿ ಸಂಖ್ಯೆ ಸೃಷ್ಟಿಸಿ ಸರ್ಕಾರಿ ಆಸ್ತಿ, ವಂಚನೆ ನೋಂದಣಿಗಳ ಪ್ರಕರಣಗಳನ್ನು ಹಾಗೂ ನೋಂದಣಿ ಹಾಗೂ ಮುದ್ರಾಂಕ ಶುಲ್ಕ ವಂಚನೆಯನ್ನು ಹಾಗೂ ಕಾನೂನು ಬದ್ಧವಲ್ಲದ ನೋಂದಣಿಗಳನ್ನು ತಡೆಗಟ್ಟಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಇ-ಖಾತಾ ಸಂಯೋಜನೆಯ ನಂತರ ಕಾನೂನು ಬಾಹಿರ ಹಾಗೂ ಬೊಟ್ಟಿ ದಾಖಲೆಗಳನ್ನು ಸೃಷ್ಟಿಸಿಕೊಂಡು ನೋಂದಣಿ ಮಾಡಿಸಿಕೊಳ್ಳುತ್ತಿದ್ದ ದಸ್ತಾವೇಜುಗಳ ಸಂಖ್ಯೆ ಕುಂಠಿತವಾಗಿದೆ. ಹೀಗಾಗಿ ಕಾನೂನು ಬದ್ಧವಾಗಿ ನೂಐಜವಾದ ಆಸ್ತಿ ನೋಂದಣಿಯಿಂದ ಸರ್ಕಾರಕ್ಕೆ ಯಾವುದೇ ಆದಾಯ ನಷ್ಟ ಉಂಟಾಗಿರುವುದಿಲ್ಲ ಎಂದು ಹೇಳಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…