ಬೆಂಗಳೂರು:ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಕುರಿತಾಗಿ ಅಕ್ಟೋಬರ್ 9ರ ಒಳಗಾಗಿ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಶುಕ್ರವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸರ್ವಾನುಮತದಿಂದ ಈ ಬಗ್ಗೆ ಸಿಎಂಗೆ ಆಗ್ರಹ ಮಾಡಲಾಗಿದೆ ಎಂದರು.
ಬಿಜೆಪಿ ಹಿಂದಿನಿಂದಲೂ ಎಸ್ಟಿ, ಎಸ್ಸಿ ಸಮುದಾಯದ ಹಿತ ಚಿಂತನೆ ಮಾಡುತ್ತಾ ಬಂದಿದೆ. ಈ ಹಿನ್ನಲೆಯಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳ ತೀರ್ಮಾನ ಮಾಡಲು ಆಗ್ರಹ ಮಾಡಲಾಗಿದೆ. ಎಸ್ಸಿ ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸದಾಶಿವ ಆಯೋಗದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು . ಮೀಸಲಾತಿ ಎಷ್ಟು ಪ್ರಮಾಣದಲ್ಲಿ ಏರಿಕೆ ಎಂಬುದನ್ನು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರ ಮಾಡಲಿದ್ದು ಎಲ್ಲ ಮೀಸಲಾತಿ ವಿಚಾರವಾಗಿ ಈಗಾಗಲೇ ಸಮಿತಿ ನೇಮಕ ಮಾಡಿದೆ.
ಸಾಮಾಜಿಕ ನ್ಯಾಯ ಪಾಲನೆಗೆ ಬಿಜೆಪಿ ಬದ್ಧ. ಈ ಬಗ್ಗೆ ರಾಜಿ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಿಂದಿನಿಂದಲೂ ಎಸ್ಟಿ, ಎಸ್ಸಿ ಸಮುದಾಯದ ಹಿತ ಚಿಂತನೆ ಮಾಡುತ್ತಾ ಬಂದಿದೆ. ಈ ಹಿನ್ನಲೆಯಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳ ತೀರ್ಮಾನ ಮಾಡಲು ಆಗ್ರಹ ಮಾಡಲಾಗಿದೆ.
ಮೀಸಲಾತಿ ಎಷ್ಟು ಪ್ರಮಾಣದಲ್ಲಿ ಏರಿಕೆ ಎಂಬುದನ್ನು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರ ಮಾಡುತ್ತಾರೆ. ಎಲ್ಲ ಮೀಸಲಾತಿ ವಿಚಾರವಾಗಿ ಈಗಾಗಲೇ ಸಮಿತಿ ನೇಮಕ ಮಾಡಿದೆ. ಸಾಮಾಜಿಕ ನ್ಯಾಯ ಪಾಲನೆಗೆ ಬಿಜೆಪಿ ಬದ್ಧ. ಈ ಬಗ್ಗೆ ರಾಜಿ ಮಾಡುವ ಪ್ರಶ್ನೆಯೇ ಇಲ್ಲ ಎಂದರು.