Mysore
19
mist

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಅಂತರ್ಜಾತಿ ವಿವಾಹ ಹೆಚ್ಚಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯನಗರ: ಜಾತಿ ವ್ಯವಸ್ಥೆಯನ್ನು ತೊಲಗಿಸಲು 12ನೇ ಶತಮಾನದಲ್ಲಿ ಬಸವಣ್ಣನವರು ಅಂತರ್ಜಾತಿ ವಿವಾಹಕ್ಕೆ ಉತ್ತೇಜನ ನೀಡಿದ್ದರು. ಅದೇ ರೀತಿ ಈಗ ನಾವೆಲ್ಲ ಅಂತರ್ಜಾತಿ ವಿವಾಹ ಉತ್ತೇಜಿಸುವ ಆಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು (ಜ.12) ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸಿರಾಜ್‌ ಶೇಖ್‌ ಅವರ ಮಗನ ಮದುವೆ ಜತೆಗೆ ಹಮ್ಮಿಕೊಂಡ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾತಿ ವ್ಯವಸ್ಥೆ ನಾಶವಾಗಿ ಸಮ ಸಮಾಜ ನಿರ್ಮಾಣವಾಗಲು ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು ಎಂದು ತಿಳಿಸಿದರು.

ಲಂಬಾಣಿ ಸಮುದಾಯ ತಾಂಡಾ ಬಿಟ್ಟು ಹೊರಬಂದಿದ್ದಕ್ಕೆ ಕೊಂಡಾಡಿದ ಅವರು, ಇಂತಹ ಮದುವೆಗಳು ಹೆಚ್ಚಾಗಿ ನಡೆಯಬೇಕು. ಶ್ರೀಮಂತರು ತಮ್ಮ ಸಂಪತ್ತನ್ನು ಇಂತಹ ಸಮಾಜಮುಖಿ ಕಾರ್ಯಗಳಿಗೆ ಸ್ವಲ್ಪ ಬಳಸಬೇಕು ಎಂದು ಹೇಳಿದರು.

Tags:
error: Content is protected !!