ಬೆಂಗಳೂರು: ಕರ್ನಾಟಕದಲ್ಲಿ ‘ಮದ್ಯ’ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ.
ಹೌದು, ಬಿಯರ್ ಜೊತೆಗೆ ಇತರೆ ಮಾದರಿಯ ಮದ್ಯ ಮಾರಾಟದ ಪ್ರಮಾಣ 0.43 ಶೇ. ಹೆಚ್ಚಳವಾಗಿದ್ದು, ಗ್ಯಾರಂಟಿ ಯೋಜನೆಗಳನ್ನು ನೀಡಿ ಬೇರೆ ಯೋಜನೆಗಳಿಗೆ ಹಣ ನೀಡಲು ಕಷ್ಟಪಡುತ್ತಿದ್ದ ಸರ್ಕಾರಕ್ಕೆ ಮದ್ಯ ಪ್ರಿಯರು ಬೂಸ್ಟ್ ನೀಡಿದ್ದಾರೆ.
ಮದ್ಯ ದರ ಏರಿಕೆಯಾದರೂ ತಲೆ ಕೆಡಿಸಿಕೊಳ್ಳದ ಮದ್ಯ ಪ್ರಿಯರು ಕುಡಿಯುವದನ್ನು ಕಡಿಮೆ ಮಾಡಲಿಲ್ಲ. ಕಳೆದ ವರ್ಷ ದಿನಕ್ಕೆ 80 ಕೋಟಿ ರೂ. ಸರಾಸರಿ ಆದಾಯ ಬರುತ್ತಿತ್ತು.ಈಗ ಒಂದು ದಿನಕ್ಕೆ 90 ಕೋಟಿ ರೂ,ಗೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅದರಲ್ಲಿಯೂ ಚಳಿಗಾಲ ಶುರುವಾಗ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಗೆ ಭಾರೀ ಬೇಡಿಕೆ ಬಂದಿದ್ದು, ನವೆಂಬರ್ನಲ್ಲಿ ಬರೋಬ್ಬರಿ 6 ಲಕ್ಷ ಬಿಯರ್ ಬಾಕ್ಸ್ಗಳು ಸೇಲ್ ಆಗಿದೆ ಎಂದು ಮೂಲಗಳು ತಿಳಿಸಿದೆ.
ಕಳೆದ ವರ್ಷ ನವೆಂಬರ್ ತಿಂಗಳಲ್ಲಿ 29.95 ಲಕ್ಷ ಬಾಕ್ಸ್ ಸೇಲ್ ಆಗಿದ್ರೆ , ಈ ವರ್ಷ ನವೆಂಬರ್ ನಲ್ಲಿ 35.05 ಲಕ್ಷ ಬಾಕ್ಸ್ ಮಾರಾಟವಾಗಿದೆ. 2023 ನವೆಂಬರ್ ನಲ್ಲಿ 2,855 ಕೋಟಿ ರೂ. ಆದಾಯ ಬಂದಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…
ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದ ಮೂಲಕ ನಂಜನಗೂಡು ಹಾಗೂ ಚಾಮರಾಜನಗರ ಸಂಜೆಯ ವೇಳೆ ಸಾಕಷ್ಟು ಬಸ್‌ಗಳಿಲ್ಲದೆ…
ಸೇಡು.. ಕೇಡು ! ಯುದ್ಧವೆಂದರೆ ಏನಿದೆ ಅದರಲ್ಲಿ.. ದೇಶ-ದೇಶಗಳ ನಡುವೆ ಬರೀ ದ್ವೇಷ, ಸೇಡು ಭರಿಸಲಾಗದ ಕೇಡು ಗೆದ್ದವರ ಹಾಡು…
ದೇಶದಲ್ಲಿ ಸಾವಿರಾರು ಯುವಕರು ವಿದ್ಯಾವಂತರಾಗಿದ್ದರೂ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಕೇಂದ್ರ ಹಾಗೂ ರಾಜ್ಯ…
ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…