ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಏರಿಕೆಯ ಜೊತೆ ಜೊತೆಗೆ, ಕೊರೋನಾ ರೂಪಾಂತರಿ ಜೆಎನ್.1 ಆರ್ಭಟವೂ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ ಕರ್ನಾಟದಲ್ಲಿ 8 ಮಂದಿಗೆ ಜೆಎನ್.1 ಸೋಂಕು ದೃಢಪಟ್ಟಿದೆ.
ಈ ಕುರಿತಂತೆ INSACOG ದಿಂದ ವರದಿಯನ್ನು ಬಿಡುಗಡೆ ಮಾಡಿದ್ದು, ಕಳೆದ ಕೆಲವು ವಾರಗಳಿಂದ ಹಲವಾರು ರಾಜ್ಯಗಳು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ವರದಿ ಮಾಡುತ್ತಿವೆ.
ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಇಲ್ಲಿಯವರೆಗೆ ವೈರಸ್ನ ಜೆಎನ್ .1 ಉಪ-ರೂಪಾಂತರದ ಉಪಸ್ಥಿತಿಯನ್ನು ಪತ್ತೆ ಮಾಡಿವೆ ಎಂದು ಹೇಳಿದೆ.
ಕೇರಳ (83), ಗುಜರಾತ್ (34), ಗೋವಾ (18), ಕರ್ನಾಟಕ (8), ಮಹಾರಾಷ್ಟ್ರ (7), ರಾಜಸ್ಥಾನ (5), ತಮಿಳುನಾಡು (4), ತೆಲಂಗಾಣ (2) ಮತ್ತು ದೆಹಲಿ (1) ಈ ರಾಜ್ಯಗಳಾಗಿವೆ ಎಂದು ಭಾರತೀಯ ಸಾರ್ಸ್-ಕೋವ್-2 ಜೀನೋಮಿಕ್ಸ್ ಕನ್ಸೋರ್ಟಿಯಂ (ಐಎನ್‌ಎಸ್‌ಎಸಿಒಜಿ) ಎಂದು ಮಾಹಿತಿ ನೀಡಿದೆ.
ಡಿಸೆಂಬರ್ನಲ್ಲಿ ದೇಶದಲ್ಲಿ ದಾಖಲಾದ 145 ಕೋವಿಡ್ ಪ್ರಕರಣಗಳಲ್ಲಿ ಜೆಎನ್ .1 ಉಪಸ್ಥಿತಿ ಇದ್ದರೆ, ನವೆಂಬರ್ನಲ್ಲಿ ಅಂತಹ 17 ಪ್ರಕರಣಗಳು ಪತ್ತೆಯಾಗಿವೆ ಎಂದು ಇನ್ಸಾಕೋಗ್ನ ಅಂಕಿ ಅಂಶಗಳಿಂದ ತಿಳಿದು ಬಂದಿದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…