ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ ಗಣನೀಯ ಪರಿಣಾಮ ಬೀರುತ್ತಿದೆ.
ತಾಪಮಾನ ಏರಿಕೆಯಿಂದ ಹೀಟ್ ವೇವ್ ಮತ್ತು ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಈ ಅಪಾಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಆರೋಗ್ಯ ಇಲಾಖೆ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿದೆ
ಜನರ ಆರೋಗ್ಯ ಕಾಪಾಡಲು ಹಾಗೂ ತುರ್ತು ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಆರೋಗ್ಯ ಇಲಾಖೆ ಸೂಚನೆ ನೀಡಲಾಗಿದೆ.
ಜಿಲ್ಲೆ ಜಿಲ್ಲೆಯ ಆರೋಗ್ಯ ಅಧಿಕಾರಿಗಳಿಗೆ ವಿಶೇಷ ಮಾರ್ಗಸೂಚಿ ಕಳುಹಿಸಲಾಗಿದ್ದು ಅವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ತಿಳಿಸಲಾಗಿದೆ.
ಆರೋಗ್ಯ ಇಲಾಖೆ ನಿರ್ದೇಶನದ ಪ್ರಕಾರ, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ Heat stroke Management Room ಸ್ಥಾಪನೆ ಕಡ್ಡಾಯವಾಗಿದೆ. ಈ ವಿಶೇಷ ಕೊಠಡಿಗಳು ಏಪ್ರಿಲ್.1 ರಿಂದ ಮೇ.31ರವರೆಗೆ ಸಕ್ರಿಯವಾಗಿರಬೇಕು. ಈ ಅವಧಿಯಲ್ಲಿ ಹೀಟ್ ಸ್ಟ್ರೋಕ್ ಸಂಬಂಧಿತ ಎಲ್ಲಾ ತುರ್ತು ಪ್ರಕರಣಗಳಿಗೆ ಇಲ್ಲಿಯೇ ತಕ್ಷಣ ಚಿಕಿತ್ಸೆ ನೀಡುವ ವ್ಯವಸ್ಥೆ ಇರಬೇಕು ಎಂದು ತಿಳಿಸಲಾಗಿದೆ.
ಇನ್ನು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅಗತ್ಯವಿದ್ದರಷ್ಟೇ ಹೊರಗೆ ಬನ್ನಿ. ಬಾಯಾರಿಕೆಯಾಗದಿದ್ದರೂ ಆಗಾಗ್ಗೆ ನೀರು ಕುಡಿಯಿರಿ. ತಂಪು ಪಾನೀಯಗಳನ್ನು ಕುಡಿಯಿರಿ ಎಂದು ಸಲಹೆ ನೀಡಿದೆ.




