ರಾಜ್ಯ

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ ಗಣನೀಯ ಪರಿಣಾಮ ಬೀರುತ್ತಿದೆ.

ತಾಪಮಾನ ಏರಿಕೆಯಿಂದ ಹೀಟ್ ವೇವ್ ಮತ್ತು ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಈ ಅಪಾಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಆರೋಗ್ಯ ಇಲಾಖೆ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿದೆ

ಜನರ ಆರೋಗ್ಯ ಕಾಪಾಡಲು ಹಾಗೂ ತುರ್ತು ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಆರೋಗ್ಯ ಇಲಾಖೆ ಸೂಚನೆ ನೀಡಲಾಗಿದೆ.

ಜಿಲ್ಲೆ ಜಿಲ್ಲೆಯ ಆರೋಗ್ಯ ಅಧಿಕಾರಿಗಳಿಗೆ ವಿಶೇಷ ಮಾರ್ಗಸೂಚಿ ಕಳುಹಿಸಲಾಗಿದ್ದು ಅವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ತಿಳಿಸಲಾಗಿದೆ.

ಆರೋಗ್ಯ ಇಲಾಖೆ ನಿರ್ದೇಶನದ ಪ್ರಕಾರ, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ Heat stroke Management Room ಸ್ಥಾಪನೆ ಕಡ್ಡಾಯವಾಗಿದೆ. ಈ ವಿಶೇಷ ಕೊಠಡಿಗಳು ಏಪ್ರಿಲ್‌.1 ರಿಂದ ಮೇ.31ರವರೆಗೆ ಸಕ್ರಿಯವಾಗಿರಬೇಕು. ಈ ಅವಧಿಯಲ್ಲಿ ಹೀಟ್‌ ಸ್ಟ್ರೋಕ್‌ ಸಂಬಂಧಿತ ಎಲ್ಲಾ ತುರ್ತು ಪ್ರಕರಣಗಳಿಗೆ ಇಲ್ಲಿಯೇ ತಕ್ಷಣ ಚಿಕಿತ್ಸೆ ನೀಡುವ ವ್ಯವಸ್ಥೆ ಇರಬೇಕು ಎಂದು ತಿಳಿಸಲಾಗಿದೆ.

ಇನ್ನು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅಗತ್ಯವಿದ್ದರಷ್ಟೇ ಹೊರಗೆ ಬನ್ನಿ. ಬಾಯಾರಿಕೆಯಾಗದಿದ್ದರೂ ಆಗಾಗ್ಗೆ ನೀರು ಕುಡಿಯಿರಿ. ತಂಪು ಪಾನೀಯಗಳನ್ನು ಕುಡಿಯಿರಿ ಎಂದು ಸಲಹೆ ನೀಡಿದೆ.

 

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

21 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

21 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

21 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

21 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

21 hours ago