ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರು ಭಾರತ ಹಿಂದೂ ರಾಷ್ಟ್ರವಾಗಲಿದೆ ಎಂದು ಹೇಳಿರುವುದಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಭಾರತವು ಸರ್ವ ಜಾತಿ ಮತ್ತು ಧರ್ಮಗಳನ್ನು ಸಮಾನವಾಗಿ ಒಳಗೊಂಡಂತಹ ಜಾತ್ಯತೀತ ದೇಶ. ಇದನ್ನೇ ನಮ್ಮ ದೇಶದ ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಆದರೆ ಒಂದು ದಿನವೂ ಈ ದೇಶದ ಸಂವಿಧಾನದ ಪುಟಗಳಲ್ಲಿ ಏನಿದೆ ಎಂಬುದನ್ನು ಕಣ್ಣೆತ್ತಿಯೂ ನೋಡದೇ ಬರೀ ಮನುಸ್ಮೃತಿಯನ್ನೇ ಪ್ರತಿಪಾದಿಸುವ ಭಾಗವತ್ ಅವರಿಗೆ ಧರ್ಮ ಎಂದರೆ ಏನೆಂಬುದು ಈವರೆಗೂ ತಿಳಿದಿಲ್ಲ ಎಂದಿದ್ದಾರೆ.
ಇದನ್ನೂ ಓದಿ :-ಕೆಂಪುಕೋಟೆ ಬಳಿ ಸ್ಫೋಟ ; ದಿಲ್ಲಿಯಲ್ಲಿ ಹೈ ಅಲರ್ಟ್
ಈ ನೆಲದಲ್ಲಿ ಸ್ವಾಮಿ ವಿವೇಕಾನಂದರಿಂದ ಹಿಡಿದು ಬಹಳಷ್ಟು ಮಂದಿ ಸಂತರು, ಧರ್ಮ ಎಂದರೆ ಏನು ಎಂಬ ಸಂಗತಿಯನ್ನು ಸ್ಪಷ್ಟವಾಗಿ ಹೇಳಿ ಹೋಗಿದ್ದಾರೆ. ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅಂತಹ ಮಹನೀಯರೂ ತಮಗೆ ಕುಡಿಯಲು ನೀರುಕೊಡದ, ತಮ್ಮನ್ನು ಸಮಾನವಾಗಿ ಕಾಣದ ಹಿಂದೂ ಧರ್ಮದ ಅಮಾನವೀಯತೆಯನ್ನು ಪ್ರಶ್ನಿಸಿ, ಆ ಧರ್ಮವನ್ನೇ ತೊರೆದು ಬೌದ್ಧ ಧರ್ಮವನ್ನು ಸ್ವೀಕರಿಸಿದ್ದಾರೆ. ಹೀಗಿರುವಾಗ ಭಾರತ ಹಿಂದೂ ರಾಷ್ಟ್ರ ಆಗುತ್ತದೆ ಎಂದು ಆಗಾಗ್ಗೆ ಹೇಳುತ್ತಲೇ ಇರುವ ಮೋಹನ್ ಭಾಗವತ್ ಅವರು ಮೊದಲು ದೇಶದ ಜನರ ಕ್ಷಮೆ ಯಾಚಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.
ಮೈಸೂರು : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಅಂದು…
ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್ ರಕ್ಷಣಾ…
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…
ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್…
ಅಹಮದಬಾದ್ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.17) ತಲುಪಿರುವುದಾಗಿ ವರದಿಯಾಗಿದೆ.…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…