ರಾಜ್ಯ

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅವಮಾನವಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ ಪ್ರತಿಯೊಬ್ಬರು ಭಾರತದ ಬಗ್ಗೆ ಹಗುರವಾಗಿ ಮಾತನಾಡುಂತಾಗಿದೆ. ಇದರಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಬಗ್ಗೆ ಅವಮಾನ ಅನುಭವಿಸುವಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ವರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದರು.

ಕಲಬುರ್ಗಿಯ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಅಮೇರಿಕಾದ ವಿದೇಶಾಂಗ ಅಧಿಕಾರಿಯೊಬ್ಬರು ನಾವು ಭಾರತವನ್ನು ಬೆಳೆಯಲು ಬಿಡುವುದಿಲ್ಲ. ಯುದ್ದದ ಪರಿಣಾಮದಿಂದಾಗಿ ಭಾರತ, ರಷ್ಯಾದಿಂದ 30 ದಿನಗಳ ವರೆಗೆ ತೈಲ ಖರೀದಿಸಲು ಅನುಮತಿ ನೀಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ‌. ಭಾರತಕ್ಕೆ ಅನುಮತಿ ನೀಡಲು ಅವರು ಯಾರು? ಮೋದಿ, ಜೈಶಂಕರ್ ಸೇರಿದಂತೆ ಬಿಜೆಪಿ ನಾಯಕರು ಯಾರೊಬ್ಬರು ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. ಭಾರತದ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದರಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅವಮಾನವಾಗುತ್ತಿದೆ ಎಂದು ಖರ್ಗೆ ಟೀಕಿಸಿದರು.

ಪ್ರಶ್ನೆಯೊಂದಕ್ಕೆ‌ ಉತ್ತರಿಸುತ್ತಿದ್ದ ಸಚಿವರು, ನಾನು ಮನಸ್ಸು ಮಾಡಿದರೆ ಮೋದಿ ಅವರ ರಾಜಕೀಯ ಭವಿಷ್ಯ ಹಾಳು ಮಾಡಬಲ್ಲೆ. ಆದರೆ, ಮೋದಿ ನನ್ನ ಸ್ನೇಹಿತರು ಹಾಗಾಗಿ ನಾನು ಹಾಗೆ ಮಾಡುವುದಿಲ್ಲ ” ಎಂದು ಅಮೇರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿದ್ದಾರೆ ಇದಕ್ಕೂ ಕೂಡಾ ಮೋದಿ ಪ್ರತಿಕ್ರಿಯೆ ನೀಡಿಲ್ಲ. ಯಾಕೆ ಅವರು ಮಾತಮಾಡುತ್ತಿಲ್ಲ, ಮೋದಿಯವರ ಬಗ್ಗೆ ಎಫ್ಸ್ಟೀನ್ ಫೈಲ್ ನಲ್ಲಿ ಏನಾದರೂ ಇದೆಯಾ ? ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ ವಾಡಿದರು.

ಈ ಹಿಂದೆ ಮಧ್ಯಪ್ರಾಚ್ಯಗಳ ವಿಚಾರದಲ್ಲಿ ಅಮೇರಿಕಾ ಮಧ್ಯೆ ಪ್ರವೇಶಿಸಿದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಆ ಬಗ್ಗೆ ಆಕ್ಷೇಪ ಎತ್ತಿದ್ದರು. ಅಂತಹ ಎದೆಗಾರಿಕೆ ಮೋದಿಗೆ ಯಾಕೆ ಇಲ್ಲ? ಎಂದು ಪ್ರಶ್ನಿಸಿದ ಸಚಿವರು, ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಬಿಜೆಪಿವರು ನೆಹರು , ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಮಾತನಾಡುತ್ತಾರೆ. ಸ್ವತಃ ಮೋದಿ ಸಿನೆಮಾ ನಟ ನಟಿಯರ ಮದುವೆ, ಕ್ರಿಕೆಟ್ ತಂಡಕ್ಕೆ ಶುಭಾಶಯ ಕೋರಲು ಹೋಗುತ್ತಾರೆ. ಆದರೆ, ವಿದೇಶಾಂಗ ನೀತಿಗಖ ಬಗ್ಗೆ ಭಾರತ ದಿಟ್ಟ‌ನಿಲುವಿನ ಬಗ್ಗೆ ಮಾತನಾಡಲು‌ ಅವರಿಗೆ ಸಮಯವಿಲ್ಲ ಎಂದು ಕುಟುಕಿದರು.

ಗೃಹ ಬಳಕೆ‌ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆ ಬಗ್ಗೆ ಕೇಂದ್ರ ಸಚಿವರು ಉತ್ತರಿಸಲಿ. ಬೆಲೆ ಏರಿಕೆಯ ಮಾಸ್ಟರ್ ಸ್ಟೋಕ್ ಬಗ್ಗೆ‌ ಬಿಜೆಪಿಯವರು ಉತ್ತರಿಸಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸವಾಲು ಹಾಕಿದರು.

ಕಾಲೇಜುಗಳಲ್ಲಿ‌ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಚುನಾವಣೆಗೆ ಪೋಷಕರ ವಿರೋಧ ಸೇರಿದಂತೆ ಎಲ್ಲ ವಿಚಾರಗಳ ಬಗ್ಗೆ ಕೂಲಂಕುಷ ಪರಿಶೀಲನೆ ನಡೆಸಲಾಗುತ್ತದೆ. ಜೆಎನ್ ಯೂ ಸೇರಿದಂತೆ ಬಹುತೇಕ ‌ಶೈಕ್ಷಣಿಕ ಕೇಂದ್ರಗಳಲ್ಲಿ‌ ವಿದ್ಯಾರ್ಥಿ ಸಂಘಕ್ಕೆ‌ ಚುನಾವಣೆ ನಡೆಸಲಾಗುತ್ತಿದೆ. ಎಲ್ಲ ಹಂತದ ಪರಿಶೀಲನೆ ನಂತರ‌ ರೂಪಿಸಲಾದ ನಿಯಮಗಳ ಪ್ರಕಾರ ಎನ್ ಎಸ್ ಐ ಯೂ, ಎಬಿ ವಿಪಿ ಸಂಘಗಳು ಒಪ್ಪಬೇಕಾಗುತ್ತದೆ ಎಂದರು.

ಗ್ರಾಮಪಂಚಾಯತ್ ಅಡಿಯಲ್ಲಿ ಬಿಲ್ ಕಲೆಕ್ಟರ್ ಹಾಗೂ ಡಾಟಾ ಆಪರೇಟರ್ ಅವರುಗಳು ನೇಮಕಾತಿಗೆ ಸಂಬಂಧಿಸಿದಂತೆ ಪ್ರಾವಿಷನಲ್ ಲಿಸ್ಟ್ ಇನ್ನೂ ನೆನೆಗುದಿಗೆ ಬಿದ್ದಿರುವ ಕುರಿತು ಉತ್ತರಿಸಿದ ಸಚಿವರು ಈ ಬಗ್ಗೆ ಒಂದು ವಾರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

12 mins ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

2 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

5 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

6 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

6 hours ago