ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕ್ ವಿರುದ್ಧ ಭಾರತ ಮತ್ತಷ್ಟು ಸೇಡು ತೀರಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಸಿಲುಕಿ 26 ಮಂದಿ ಅಮಾಯಕರು ಸಾವನ್ನಪ್ಪಿದ್ದರು.
ಈ ಬೆನ್ನಲ್ಲೇ ಭಾರತವು ಪಾಕ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದಕ್ಕೆ ಹೆದರಿದ ಪಾಕ್ ಯುದ್ಧ ವಿರಾಮಕ್ಕೆ ಮನವಿ ಮಾಡಿತ್ತು. ಆದರೂ ಪಾಕ್ ಸೇನೆ ಉದ್ದೇಶ ಪೂರ್ವಕವಾಗಿ ಭಾರತದ ಮೇಲೆ ಫೈರಿಂಗ್ ಮಾಡಿದೆ. ಈ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:- ಕದನ ವಿರಾಮದ ಬಳಿಕ ಸಹಜ ಸ್ಥಿತಿಗೆ ಮರಳುತ್ತಿರುವ ಜಮ್ಮು ಮತ್ತು ಕಾಶ್ಮೀರ
ಇನ್ನು ನಮ್ಮ ಸೇನಾಪಡೆ ಪಾಕ್‌ಗೆ ತಕ್ಕ ಉತ್ತರ ಕೊಟ್ಟಿದೆ. ನಮ್ಮ 3 ಸೇನಾಪಡೆಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರೂ ಪಾಕಿಸ್ತಾನ ಪ್ರತಿ ಬಾರಿ ಅಧಿಕ ಪ್ರಸಂಗತನ ಮಾಡುತ್ತಿದೆ. ಕೇಂದ್ರ ಸರ್ಕಾರದ ನಿರ್ಣಯವನ್ನು ನಾನು ಮೆಚ್ಚುತ್ತೇನೆ ಎಂದು ಹಾಡಿ ಹೊಗಳಿದ್ದಾರೆ.
ಪಹಲ್ಗಾಮ್ ಹತ್ಯೆಗೆ ಇನ್ನೂ ಹೆಚ್ಚಿಗೆ ಸೇಡು ತೀರಿಸಿಕೊಳ್ಳಬೇಕು. ಭಾರತ ಸರ್ಕಾರ, ಸೇನೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅದನ್ನು ಮೆಚ್ಚಬೇಕು. ಈಗಾಗಲೇ ನಮ್ಮ ಸೇನೆ ಎಚ್ಚರಿಕೆ ಕೊಟ್ಟಿದೆ ಎಂದರು.





