Categories: ರಾಜ್ಯ

ಪಹಲ್ಗಾಮ್‌ ದಾಳಿ ವಿರುದ್ಧ ಭಾರತ ಮತ್ತಷ್ಟು ಸೇಡು ತೀರಿಸಿಕೊಳ್ಳಬೇಕು: ಕಾಂಗ್ರೆಸ್‌ ನಾಯಕ ಆರ್.ವಿ.ದೇಶಪಾಂಡೆ

ಬೆಂಗಳೂರು: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕ್‌ ವಿರುದ್ಧ ಭಾರತ ಮತ್ತಷ್ಟು ಸೇಡು ತೀರಿಸಿಕೊಳ್ಳಬೇಕು ಎಂದು ಕಾಂಗ್ರೆಸ್‌ ನಾಯಕ ಆರ್.‌ವಿ.ದೇಶಪಾಂಡೆ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಸಿಲುಕಿ 26 ಮಂದಿ ಅಮಾಯಕರು ಸಾವನ್ನಪ್ಪಿದ್ದರು.

ಈ ಬೆನ್ನಲ್ಲೇ ಭಾರತವು ಪಾಕ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದಕ್ಕೆ ಹೆದರಿದ ಪಾಕ್‌ ಯುದ್ಧ ವಿರಾಮಕ್ಕೆ ಮನವಿ ಮಾಡಿತ್ತು. ಆದರೂ ಪಾಕ್‌ ಸೇನೆ ಉದ್ದೇಶ ಪೂರ್ವಕವಾಗಿ ಭಾರತದ ಮೇಲೆ ಫೈರಿಂಗ್‌ ಮಾಡಿದೆ. ಈ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:- ಕದನ ವಿರಾಮದ ಬಳಿಕ ಸಹಜ ಸ್ಥಿತಿಗೆ ಮರಳುತ್ತಿರುವ ಜಮ್ಮು ಮತ್ತು ಕಾಶ್ಮೀರ 

ಇನ್ನು ನಮ್ಮ ಸೇನಾಪಡೆ ಪಾಕ್‌ಗೆ ತಕ್ಕ ಉತ್ತರ ಕೊಟ್ಟಿದೆ. ನಮ್ಮ 3 ಸೇನಾಪಡೆಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರೂ ಪಾಕಿಸ್ತಾನ ಪ್ರತಿ ಬಾರಿ ಅಧಿಕ ಪ್ರಸಂಗತನ ಮಾಡುತ್ತಿದೆ. ಕೇಂದ್ರ ಸರ್ಕಾರದ ನಿರ್ಣಯವನ್ನು ನಾನು ಮೆಚ್ಚುತ್ತೇನೆ ಎಂದು ಹಾಡಿ ಹೊಗಳಿದ್ದಾರೆ.

ಪಹಲ್ಗಾಮ್‌ ಹತ್ಯೆಗೆ ಇನ್ನೂ ಹೆಚ್ಚಿಗೆ ಸೇಡು ತೀರಿಸಿಕೊಳ್ಳಬೇಕು. ಭಾರತ ಸರ್ಕಾರ, ಸೇನೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅದನ್ನು ಮೆಚ್ಚಬೇಕು. ಈಗಾಗಲೇ ನಮ್ಮ ಸೇನೆ ಎಚ್ಚರಿಕೆ ಕೊಟ್ಟಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

11 mins ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

12 mins ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

15 mins ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

17 mins ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

23 mins ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

29 mins ago