ರಾಜ್ಯ

ಪಾಕ್‌ ವಿರುದ್ಧ ರಾಜತಾಂತ್ರಿಕ ಹೆಚ್ಚೆ ಇಟ್ಟ ಭಾರತ : 7 ಸಂಸದರ ನಿಯೋಗ ಶೀಘ್ರದಲ್ಲೇ ವಿದೇಶಕ್ಕೆ..!

ಹೊಸದಿಲ್ಲಿ : ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಆಪರೇಷನ್ ಸಿಂಧೂರದ ಮೂಲಕ ಪ್ರತೀಕಾರ ತೀರಿಸಿಕೊಂಡಿರವ ಭಾರತ, ಇದೀಗ ಭಯೋತ್ಪಾದನೆ ನಿರ್ಮೂಲನೆಗೆ ಹೊಸ ಅಸ್ತ್ರ ಪ್ರಯೋಗಿಸಿದೆ. ಭಯೋತ್ಪಾದನಾ ಕೃತ್ಯಕ್ಕೆ ಪೂರ್ಣವಿರಾಮ ಹಾಕಲು ಭಾರತ ಪ್ರಮುಖ ರಾಜತಾಂತ್ರಿಕ ಹೆಜ್ಜೆ ಇಟ್ಟಿದೆ.

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ತೋರಿಸಲು ಕೇಂದ್ರ ಸರ್ಕಾರ 7 ಸರ್ವ ಪಕ್ಷ ನಿಯೋಗ ರಚಿಸಿದೆ. ಈ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಮಾಹಿತಿ ನೀಡಿ ಜಾಗತಿಕ ಮಟ್ಟದಲ್ಲಿ ಪಾಕ್ ಉಗ್ರ ಮುಖವಾಡ ಬಯಲು ಮಾಡಲು ಸರ್ವಪಕ್ಷ ನಿಯೋಗ ವಿವಿಧ ದೇಶಗಳಿಗೆ ಭೇಟಿ ನೀಡಲಿದೆ ಎಂದು ತಿಳಿಸಿದ್ದಾರೆ.

ಪ್ರಾದೇಶಿಕ ಬಣಗಳಾಗಿ ವಿಂಗಡಿಸಲಾದ ನಿಯೋಗಗಳು ಮೇ 22 ಅಥವಾ 23ರ ವೇಳೆಗೆ 10 ದಿನಗಳ ಕಾಲ ಪ್ರಯಾಣಿಸಲಿವೆ. ಸಂಸದರ ಜೊತೆ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಪ್ರಯಾಣಿಸಿ ವಿಶ್ವದ ಮುಂದೆ ಪಾಕ್‌ನ ಮುಖವಾಡವನ್ನು ಕಳಚಲಿದ್ದಾರೆ.

ಸರ್ವಪಕ್ಷ ಸಂಸದರ ನಿಯೋಗದಲ್ಲಿ ಯಾರಿದ್ದಾರೆ?
ತಂಡ 1 : ಶಶಿ ತರೂರ್, ಕಾಂಗ್ರೆಸ್
ತಂಡ 2 : ರವಿಶಂಕರ್ ಪ್ರಸಾದ್, ಬಿಜೆಪಿ
ತಂಡ 3 : ಸಂಜಯ್ ಕುಮಾರ್ ಝಾ, ಜೆಡಿಯು
ತಂಡ 4 : ಬೈಜಯಂತ್ ಪಾಂಡಾ, ಬಿಜೆಪಿ
ತಂಡ 5 : ಕನಿಮೋಳಿ ಕರುಣಾನಿಧಿ, ಡಿಎಂಕೆ
ತಂಡ 6 : ಸುಪ್ರಿಯಾ ಸುಳೆ, ಎನ್‌ಸಿಪಿ
ತಂಡ 7 : ಶ್ರೀಕಾಂತ್ ಏಕನಾಥ್ ಶಿಂಧೆ, ಶಿವಸೇನೆ

ರವಿಶಂಕರ್ ಪ್ರಸಾದ್ ನೇತೃತ್ವದ ನಿಯೋಗವು ಸೌದಿ ಅರೇಬಿಯಾ, ಕುವೈತ್, ಬಹರೇನ್‌ ಮತ್ತು ಅಲ್ಜೀರಿಯಾಕ್ಕೆ ಭೇಟಿ ನೀಡುವ ನಿರೀಕ್ಷೆಯಿದ್ದರೆ, ಸುಪ್ರಿಯಾ ಸುಳೆ ಅವರ ತಂಡ ಓಮನ್, ಕೀನ್ಯಾ, ದಕ್ಷಿಣ ಆಫ್ರಿಕಾ ಮತ್ತು ಈಜಿಪ್ಟ್‌ಗೆ ಪ್ರಯಾಣಿಸಲಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್‌…

19 mins ago

ಹುಮನಾಬಾದ್ ಸ್ಫೋಟ: ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…

42 mins ago

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

2 hours ago

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

2 hours ago

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

2 hours ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

3 hours ago