pm (3)
ಬೆಂಗಳೂರು: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಕನ್ನಡದಲ್ಲೇ ಭಾಷಣ ಆರಂಭಿಸಿದರು.
ಬೆಂಗಳೂರು ಅಧಿದೇವತೆ ಅಣ್ಣಮ್ಮ ತಾಯಿಗೆ ನಮನಗಳು. ನಾಡಪ್ರಭು ಕೆಂಪೇಗೌಡರಿಗೆ ನಮನಗಳು ಎಂದು ಸ್ಮರಿಸಿ ಬೆಂಗಳೂರು ಮಹಾನಗರ ಭವಿಷ್ಯದ ಕನಸನ್ನು ಸಾಕಾರಗೊಳಿಸುತ್ತಿದೆ ಎಂದು ಹೇಳಿದರು.
ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಆಪರೇಷನ್ ಸಿಂಧೂರ ನಡೆಸಿ ಭಾರತ ವಿಶ್ವರೂಪದರ್ಶಿಸಿದೆ. ಇಡೀ ಜಗತ್ತು ನವ ಭಾರತದ ರೂಪವನ್ನು ಕಂಡಿದೆ. ಮೇಕ್ ಇನ್ ಇಂಡಿಯಾ ಶಕ್ತಿಯನ್ನು ತೋರಿಸಿದ್ದೇವೆ. ಆಪರೇಷನ್ ಸಿಂಧೂರ ಬಳಿಕ ನಾನು ಮೊದಲ ಬಾರಿಗೆ ಬೆಂಗಳೂರಿಗೆ ಬಂದಿದ್ದೇನೆ. ಆಪರೇಷನ್ ಸಿಂಧೂರ ಸಫಲತೆಯ ಹಿಂದೆ ಮೇಕ್ ಇನ್ ಇಂಡಿಯಾ ಶಕ್ತಿ ಇದೆ. ಇದರಲ್ಲಿ ಬೆಂಗಳೂರು, ಕರ್ನಾಟಕದ ಯುವ ತಂತ್ರಜ್ಞಾನ ಇದೆ ಎಂದು ಹೇಳಿದರು.
ಬೆಂಗಳೂರು ನಗರ ನವ ಭಾರತದ ಸಂಕೇತವಾಗಿದೆ. ಗ್ಲೋಬಲ್ ಐಟಿಯಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದೆ. ಬೆಂಗಳೂರು ನಗರದ ಯಶಸ್ವಿಗೆ ಇಲ್ಲಿನ ಜನರ ಶ್ರಮ, ಪ್ರತಿಭೆ ಕಾರಣವಾಗಿದೆ. ಭವಿಷ್ಯಕ್ಕಾಗಿ ಬೆಂಗಳೂರಿನಂತಹ ನಗರಗಳನ್ನು ರೂಪಿಸಬೇಕು. ಅದಕ್ಕಾಗಿ ಕೇಂದ್ರ ಸರ್ಕಾರ ಸಾವಿರಾರು ಕೋಟಿ ಅನುದಾನ ನೀಡುತ್ತಿದೆ ಎಂದು ಹೇಳಿದರು.
ಬೆಂಗಳೂರನ್ನು ಭವಿಷ್ಯದ ದಿನಕ್ಕಾಗಿ ರೂಪಿಸಬೇಕಾಗಿದೆ. ಬೆಂಗಳೂರು ನಗರ ಹೊಸ ಭಾರತದ ರೂಪಕ. ಜಾಗತಿಕ ಐಟಿ ಕ್ಷೇತ್ರದಲ್ಲಿ ಛಾಪು ಮೂಡಿಸಿದೆ. ನಿಮ್ಮೆಲ್ಲರ ಶ್ರಮ. ಪ್ರತಿಭೆಯಿಂದ ಇದರ ಹಿಂದೆ ಇದೆ. ನಗರ ದಕ್ಷ ಸುರಕ್ಷಿತವಾಗಿದ್ದರೆ ನಾವು ಅಭಿವೃದ್ಧಿ ಹೊಂದುತ್ತೇವೆ. ಶೀಘ್ರದಲ್ಲೇ ಭಾರತ ವಿಶ್ವದ ಅತಿದೊಡ್ಡ ಮೂರನೇ ಆರ್ಥಿಕತೆ ದೇಶವಾಗಲಿದೆ. 10ನೇ ಸ್ಥಾನದಿಂದ 4ನೇ ಸ್ಥಾನಕ್ಕೆ ಬಂದಿದ್ದೇವೆ. ಶೀಘ್ರವೇ ಭಾರತದ ಆರ್ಥಿಕತೆ ವಿಶ್ವದ ಅತಿದೊಡ್ಡ ಮೂರನೇ ಆರ್ಥಿಕತೆ ದೇಶವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…