ರಾಜ್ಯ

ಚಾಂಪಿಯನ್‌ ಟ್ರೋಫಿ ಗೆದ್ದಭಾರತ: ಟೀಂ ಇಂಡಿಯಾಗೆ ಶುಭಕೋರಿದ ಗಣ್ಯರು

ಮೈಸೂರು: ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ಭಾನುವಾರ ನಡೆದ ಐಸಿಸಿ ಚಾಂಪಿಯನ್‌ ಟ್ರೋಫಿ-2025 ಪಂದ್ಯದಲ್ಲಿ ಗೆದ್ದ ಟೀ ಇಂಡಿಯಾ ತಂಡಕ್ಕೆ ಗಣ್ಯಾತಿಗಣ್ಯರು ಶುಭ ಕೋರಿದ್ದಾರೆ.

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ (New Zealand) ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಈ ಹಿನ್ನೆಲೆ ಗೆದ್ದ ಭಾರತ ತಂಡವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಶುಭಕೋರಿದ್ದಾರೆ.

ಭಾರತ ಗೆದ್ದಿದೆ.. ಈ ಸಲ ಕಪ್ ನಮ್ದೆ..: ಸಿಎಂ ಸಿದ್ದರಾಮಯ್ಯ

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಅಮೋಘ‌ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು ಎಂದು ಶುಭಕೋರಿದ್ದಾರೆ.

ಬೌಲಿಂಗ್, ಬ್ಯಾಟಿಂಗ್, ಕ್ಷೇತ್ರರಕ್ಷಣೆ ಹೀಗೆ ಎಲ್ಲಾ ವಿಭಾಗಗಳಲ್ಲೂ ನಮ್ಮವರ ಆಟ ಹುಬ್ಬೇರಿಸುವಂತಿತ್ತು. ಪ್ರತಿ ಪಂದ್ಯದಲ್ಲೂ ರನ್ ಗಳಿಸುತ್ತಾ, ನಿರಂತರವಾಗಿ ತಂಡವನ್ನು ಗೆಲುವಿನ ದಡ ಸೇರಿಸುತ್ತಿರುವ ನಾಡಿನ ಮನೆಮಗ ಕೆ.ಎಲ್. ರಾಹುಲ್ ಆಟ ಹೆಚ್ಚು ಖುಷಿಕೊಟ್ಟಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಶುಭಾಶಯಗಳು ಟೀಂ ಇಂಡಿಯಾ: ಡಿಸಿಎಂ ಡಿ.ಕೆ.ಶಿವಕುಮಾರ್‌

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಟ್ವೀಟ್‌ ಮಾಡಿ, ಚಾಂಪಿಯನ್ಸ್ ಟ್ರೋಫಿ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ ಟೀಂ ಇಂಡಿಯಾಗೆ ಹಾರ್ದಿಕ ಶುಭಾಶಯಗಳು ಎಂದಿದ್ದಾರೆ.

ರೋಹಿತ್ ಶರ್ಮಾ ಅವರ 76 ರನ್ ಮತ್ತು ಕೆಎಲ್ ರಾಹುಲ್ ಅವರ ಅಜೇಯ 34 ರನ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದೆ. ಟೀಂ ಇಂಡಿಯಾದ ಒಗ್ಗಟ್ಟಿನ ಪ್ರದರ್ಶನ ಶ್ಲಾಘನೀಯ. ಭಾನುವಾರ(ಮಾರ್ಚ್‌.9) ಕನಕಪುರದಲ್ಲಿ ಪಂದ್ಯಾವಳಿಯ ಕೊನೆಯ ಕ್ಷಣಗಳನ್ನು ವೀಕ್ಷಿಸಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಎಚ್‌.ಡಿ.ಕುಮಾರಸ್ವಾಮಿ ಅವರು, ಪ್ರತಿಷ್ಠಿತ ChampionsTrophy-2025 ಅಂತಿಮ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ವೀರೋಚಿತ ಗೆಲುವು ಸಾಧಿಸಿದ ಭಾರತ ಕ್ರಿಕೆಟ್ ತಂಡ ಹೊಸ ಇತಿಹಾಸ ನಿರ್ಮಿಸಿದೆ ಎಂದು ಹೇಳಿದ್ದಾರೆ.

ನಮ್ಮೆಲ್ಲರ ಹೆಮ್ಮೆಯ TeamIndia ಸಂಘಟಿತ ಹೋರಾಟ, ಅದ್ಭುತ ಪ್ರದರ್ಶನದಿಂದ ಇಡೀ ರಾಷ್ಟ್ರವೇ ಸಂಭ್ರಮದಿಂದ ಕುಣಿದು ಕುಪ್ಪಳಿಸುವಂತೆ ಮಾಡಿದೆ. ಇಂತಹ ಅವಿಸ್ಮರಣೀಯ ವಿಜಯಕ್ಕೆ ಕಾರಣರಾದ ಆಟಗಾರರೆಲ್ಲರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ಶುಭಾಶಯ ತಿಳಿಸಿದ್ದಾರೆ.

ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತ ಕ್ರಿಕೆಟ್ ತಂಡಕ್ಕೆ ಹಾರ್ದಿಕ ಅಭಿನಂದನೆಗಳು ಎಂದು ಶುಭಾಶಯ ಕೋರಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

8 mins ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

21 mins ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

46 mins ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

51 mins ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

2 hours ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

2 hours ago