Mysore
16
overcast clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಖೋ-ಖೋ ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ: ಸಿಎಂ ಸಿದ್ದರಾಮಯ್ಯ ಶ್ಲಾಘನೆ

ಬೆಂಗಳೂರು: ಭಾರತದ ಖೋ-ಖೋ ತಂಡ ಚೊಚ್ಚಲ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತದ ಮಹಿಳಾ ಹಾಗೂ ಪುರುಷರ ತಂಡ ಗೆಲುವು ಸಾಧಿಸಿದ್ದು, ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮುಖಾಂತರ ಶುಭಾಶಯ ತಿಳಿಸಿ ಶ್ಲಾಘಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮೊಟ್ಟ ಮೊದಲ
ಖೋ-ಖೋ ವಿಶ್ವಕಪ್ ಪಂದ್ಯಾಕೂಟದಲ್ಲಿ ನೇಪಾಳವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೋ-ಖೋ ತಂಡಕ್ಕೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಚೊಚ್ಚಲ ಖೋ-ಖೋ ವಿಶ್ವಕಪ್‌ನಲ್ಲಿ ಭಾರತೀಯ ತಂಡಗಳು ಮಾಡಿರುವ ಈ ಅಮೋಘ ಸಾಧನೆ
ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯಲಿದೆ. ಇನ್ನೂ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಕುರುಬೂರಿನ ಯುವತಿ ಬಿ.ಚೈತ್ರಾ ಅವರು ವಿಶ್ವವಿಜೇತ ಮಹಿಳಾ ಖೋ-ಖೋ ತಂಡದಲ್ಲಿ ಭಾಗಿಯಾಗಿರುವುದು ನಮ್ಮ ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ. ಅಲ್ಲದೇ ಈ ವಿಶ್ವಕಪ್‌ನ ಗೆಲುವು ಭಾರತೀಯರ ಪಾಲಿಗೆ ಇದೊಂದು ಐತಿಹಾಸಿಕ ದಿನವಾಗಿದೆ ಎಂದು ಹೇಳಿದ್ದಾರೆ.

Tags: