ಬೆಂಗಳೂರು: ಭಾರತದ ಖೋ-ಖೋ ತಂಡ ಚೊಚ್ಚಲ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಮಹಿಳಾ ಹಾಗೂ ಪುರುಷರ ತಂಡ ಗೆಲುವು ಸಾಧಿಸಿದ್ದು, ಸಿಎಂ ಸಿದ್ದರಾಮಯ್ಯ ಟ್ವೀಟ್ ಮುಖಾಂತರ ಶುಭಾಶಯ ತಿಳಿಸಿ ಶ್ಲಾಘಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೊಟ್ಟ ಮೊದಲ
ಖೋ-ಖೋ ವಿಶ್ವಕಪ್ ಪಂದ್ಯಾಕೂಟದಲ್ಲಿ ನೇಪಾಳವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೋ-ಖೋ ತಂಡಕ್ಕೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಚೊಚ್ಚಲ ಖೋ-ಖೋ ವಿಶ್ವಕಪ್‌ನಲ್ಲಿ ಭಾರತೀಯ ತಂಡಗಳು ಮಾಡಿರುವ ಈ ಅಮೋಘ ಸಾಧನೆ
ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯಲಿದೆ. ಇನ್ನೂ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಕುರುಬೂರಿನ ಯುವತಿ ಬಿ.ಚೈತ್ರಾ ಅವರು ವಿಶ್ವವಿಜೇತ ಮಹಿಳಾ ಖೋ-ಖೋ ತಂಡದಲ್ಲಿ ಭಾಗಿಯಾಗಿರುವುದು ನಮ್ಮ ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ. ಅಲ್ಲದೇ ಈ ವಿಶ್ವಕಪ್‌ನ ಗೆಲುವು ಭಾರತೀಯರ ಪಾಲಿಗೆ ಇದೊಂದು ಐತಿಹಾಸಿಕ ದಿನವಾಗಿದೆ ಎಂದು ಹೇಳಿದ್ದಾರೆ.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…