ರಾಜ್ಯ

ಭಾರತದ ಜಿಡಿಪಿ ೭.೩ರಷ್ಟು ಇರಲಿದೆ : ಐಎಂಎಫ್‌ ಕಾರ್ಯನಿರ್ವಾಹಕ ನಿರ್ದೇಶಕ !

ನವದೆಹಲಿ : ಐಎಂಎಫ್ ಕಾರ್ಯನಿರ್ವಾಹಕ ನಿರ್ದೇಶಕರು ಈ ವರ್ಷ ಭಾರತದ ಜಿಡಿಪಿ ಬೆಳವಣಿಗೆಯನ್ನ ಶೇಕಡಾ 7.3ರಷ್ಟು ಇರಲಿದೆ ಎಂದು ಅಂದಾಜಿಸಿದ್ದಾರೆ. ಭಾರತೀಯ ಆರ್ಥಿಕತೆಯ ಆರ್ಥಿಕ ಮೂಲಭೂತ ಅಂಶಗಳು ಬಲವಾಗಿವೆ ಎಂದು ಅವರು ಹೇಳಿದರು.

ಪ್ರಸಕ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಉತ್ತಮವಾಗಿದೆ. ಇವುಗಳನ್ನ ಮೌಲ್ಯಮಾಪನ ಮಾಡಿದ ನಂತ್ರ ಐಎಂಎಫ್ ತನ್ನ ವಿಶ್ವ ಆರ್ಥಿಕ ಔಟ್ಲುಕ್ ವರದಿಯಲ್ಲಿ ಭಾರತವನ್ನ ವಿಶ್ವದ ಅತಿದೊಡ್ಡ ಆರ್ಥಿಕತೆಯಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಎಂದು ಬಿಂಬಿಸಿದೆ.

ಇನ್ನು ಪಿಎಂ-ಕಿಸಾನ್ ಯೋಜನೆಯಡಿ ರೈತರು ಪಡೆಯುವ 6000 ರೂ.ಗಳ ನೆರವು ಮೊತ್ತವನ್ನ ಹೆಚ್ಚಿಸುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.

ಕಳೆದ ನಾಲ್ಕು-ಐದು ವರ್ಷಗಳಲ್ಲಿ ಹಣದುಬ್ಬರದ ಸರಾಸರಿ ದರವು 5% ರಿಂದ 6% ಆಗಿರುವುದರಿಂದ ರೈತರಿಗೆ ಪ್ರಸ್ತುತ 6000 ರೂ.ಗಳ ಮೊತ್ತವನ್ನು 8000 ರೂ.ಗಳಿಂದ 8500 ಸಾವಿರ ಅಥವಾ 9000 ರೂ.ಗೆ ಹೆಚ್ಚಿಸುವುದು ಉತ್ತಮ ಎಂದು ಐಎಂಎಫ್ ಕಾರ್ಯನಿರ್ವಾಹಕ ನಿರ್ದೇಶಕರು ಹೇಳಿದರು.

ಅಂದಾಜಿನ ಪ್ರಕಾರ, ಭಾರತದ ಜಿಡಿಪಿ ಬೆಳವಣಿಗೆಯು ಈ ವರ್ಷ 7.3% ಆಗಿರಬಹುದು. “2030 ರ ವೇಳೆಗೆ ಭಾರತವು 7 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಬಹುದು”

ಮುಂದಿನ 3 ವರ್ಷಗಳಲ್ಲಿ ಭಾರತದ ಆರ್ಥಿಕತೆಯ ವೇಗವು ಶೇಕಡಾ 7ರಷ್ಟಿದ್ದರೆ, 2026-27ರ ವೇಳೆಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಬಹುದು ಎಂದು ಅವರು ಹೇಳಿದರು.

2030ರ ವೇಳೆಗೆ ಭಾರತವು 7 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಬಹುದು ಎಂಬುದು ನಮ್ಮ ಅಂದಾಜು. ಮುಂದಿನ 2-3 ವರ್ಷಗಳಲ್ಲಿ ಜಿಎಸ್ಟಿ ಸಂಗ್ರಹವು ಪ್ರತಿ ತಿಂಗಳು 2 ಲಕ್ಷ ಕೋಟಿಗೆ ಹೆಚ್ಚಾಗುವ ಸಾಧ್ಯತೆಯಿದೆ.

ವೋಟ್ ಆನ್ ಅಕೌಂಟ್ ನಲ್ಲಿ ರೈತರಿಗೆ ಹೊಸ ಪ್ರಸ್ತಾಪ ಇರಬಹುದು, ಮಧ್ಯಮ ವರ್ಗದವರಿಗೂ ಹೊಸ ಘೋಷಣೆ ಇರಬಹುದು ಎಂದು ಅವರು ಊಹಿಸಿದ್ದಾರೆ. ವೈಯಕ್ತಿಕ ಆದಾಯ ತೆರಿಗೆಯಲ್ಲಿ ಸ್ವಲ್ಪ ಪರಿಹಾರವೂ ಇರಬಹುದು.

andolanait

Recent Posts

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

7 mins ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

44 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

53 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago