ಬೆಂಗಳೂರು : ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುವಾಹಟಿ – ಚೆನ್ನೈ ನಡುವಿನ ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಜೂ.19 ಗುರುವಾರ ನಡೆದಿದೆ.
ವಿಮಾನ ಗುವಾಹಟಿಯಿಂದ ಚೆನ್ನೈಗೆ ತೆರಳುತ್ತಿತ್ತು. ಇಂಧನ ಖಾಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಪೈಲಟ್ ರೂಂಗೆ ಮೇಡೇ ಸಂದೇಶ ರವಾನಿಸಿದ್ದಾರೆ. ಕೊಡಲೇ ಅಧಿಕಾರಿಗಳು ವಿಮಾನವನ್ನು ಬೆಂಗಳೂರಿನಲ್ಲಿ ಸೇಫ್ ಲ್ಯಾಂಡ್ ಮಾಡಲು ಸೂಚಿಸಿದ್ದರು. ಇದರಂತೆ ಫೈಲಟ್ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದರು ಎಂದು ವಿಮಾನಯಾನ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂಡಿಗೊ 6E-6764 ವಿಮಾನ ಸಂಜೆ 4.40ಕ್ಕೆ ಗುವಾಹಟಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು. ಇದು 7.45ಕ್ಕೆ ಚೆನ್ನೈನಲ್ಲಿ ಲ್ಯಾಂಡ್ ಆಗಬೇಕಿತ್ತು. ಮಧ್ಯದಲ್ಲಿ ಇಂಧನ ಖಾಲಿಯ ಅಲರಾಂ ಸೂಚನೆ ಬಂದಿದ್ದರಿಂದ ವಿಮಾನ ಚೆನ್ನೈ ತಲುಪುವುದು ಅಸಾಧ್ಯವಾಗಿತ್ತು. ಈ ವೇಳೆ ಪೈಲಟ್ ಮೇಡೇ ಸಂದೇಶ ರವಾನಿಸಿ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದರು.
ವಿಮಾನದಲ್ಲಿ 168 ಪ್ರಯಾಣಿಕರು, ಇಬ್ಬರು ಪೈಲಟ್, ಐವರು ಗಗನಸಖಿಯರು ಸೇರಿ 175 ಮಂದಿಯಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…