ರಾಜ್ಯ

ಇನ್ಮುಂದೆ ಆನ್‌ಲೈನ್‌ ಸೇವೆ ನೀಡಲಿದೆ ಇಂದಿರಾ ಕ್ಯಾಂಟೀನ್‌!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಿಗೆ ನೂತನ ಸ್ಪರ್ಶ ನೀಡಲು ಮುಂದಾಗಿರುವ ಬಿಬಿಎಂಪಿ, ಎಲ್ಲಾ ಕ್ಯಾಂಟೀನ್‌ಗಳಿಗೆ ಡಿಜಿಟಲ್‌ ಟಚ್‌ ಕೊಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯಲು ನೂತನ ಮಾರ್ಗ ಅನುಸರಿಸಿದೆ.

ಇಂದಿರಾ ಕ್ಯಾಂಟೀನ್‌ಗಳಲ್ಲಿ ಎಲ್‌ಇಡಿ ಮಾದರಿಯ ಮಿಷಿನ್‌ ಸ್ಕ್ರೀನ್‌ ಅಳವಡಿಸಿ ಅದರಲ್ಲಿಯೇ ಊಟ ಆರ್ಡರ್‌ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ. ಇದರ ಪೂರಕವಾಗಿ ಮೊದಲಿಗೆ ರಾಜರಾಜೇಶ್ವರಿ ನಗರದ 11 ಕ್ಯಾಂಟೀನ್‌ಗಳಲ್ಲಿ ಅನುಷ್ಠಾನಕ್ಕೆ ಬಿಬಿಎಂಪಿ ಮುಂದಾಗಿದೆ.

ಊಟದ ಆರ್ಡರ್‌ ವ್ಯವಸ್ಥೆ, ಪಾರ್ಸಲ್‌, ದೂರುಗಳನ್ನು ದಾಖಲಿಸಲು ಈ ಆನ್‌ಲೈನ್‌ ಸೇವೆ ಸಹಾಯಕಾರಿಯಾಗಲಿದೆ ಎಂದು ಹೇಳಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್:‌ 10 ಮಂದಿ ನಕ್ಸಲರ ಹತ್ಯೆ

ಜಾರ್ಖಂಡ್:‌ ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…

15 mins ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

44 mins ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

51 mins ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

1 hour ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

2 hours ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

3 hours ago