Mysore
18
few clouds

Social Media

ಶನಿವಾರ, 24 ಜನವರಿ 2026
Light
Dark

ಜನವರಿಯಿಂದ ಇಂದಿರಾ ಕಿಟ್‌ ವಿತರಣೆ

ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಪರಿಷತ್‍ನಲ್ಲಿ ತಿಳಿಸಿದರು.

ಶಾಸಕ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವು ಕಡೆ ಅಕ್ಕಿಯನ್ನು ಲಾಭನುಭವಿಗಳು ಕೊಂಡುಕೊಳ್ಳುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಜನರು ಜೋಳವನ್ನು ಬಳಸುತ್ತಾರೆ. ಇನ್ನು ಕೆಲವರು ರಾಗಿ ಬಳಕೆ ಮಾಡುತ್ತಾರೆ. ಜನವರಿ ತಿಂಗಳಿನಿಂದ 5 ಕೆಜಿ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ನೀಡಲಿದ್ದೇವೆ. ಇದರಲ್ಲಿ ಎಣ್ಣೆ, ಬೇಳೆಕಾಳು, ಪೌಷ್ಠಿಕ ಆಹಾರಗಳು ಇರಲಿವೆ ಎಂದರು.

ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಇಂದಿರಾ ಕಿಟ್ ನೀಡಲು ತೀರ್ಮಾನಿಸಲಾಗಿದೆ. ಜನವರಿಯಿಂದ ರಾಜ್ಯಾದ್ಯಂತ ಈ ಪ್ರಕ್ರಿಯೆ ಪ್ರಾರಂಭವಾಗಲಿದೆ. ಪ್ರತಿಯೊಬ್ಬರಿಗೂ ಪೌಷ್ಠಿಕ ಆಹಾರ ಒದಗಿಸುವುದು ನಮ್ಮ ಸರ್ಕಾರದ ಉದ್ದೇಶ ಎಂದು ಹೇಳಿದರು.

ಇದನ್ನು ಓದಿ: ಲ್ಯಾಂಡ್‌ ಲಾರ್ಡ್‌ ಚಿತ್ರದ ಟೀಸರ್‌ ರಿಲೀಸ್‌

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂದಿಸಿದಂತೆ ಒಟ್ಟು 29603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು. ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಇಲಾಖೆ ಕತ್ರ್ಯವ್ಯದಿಂದ ಬಿಡುಗಡೆಗೊಳಿಸಲಾಗಿದೆ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆ..ಸಿ.ಎಸ್.ಸಿ. ಗೋದಾಮು ಅಮಾನತ್ತುಗೊಳಿಸಲಾಗಿದೆ ಎಂದು ತಿಳಿಸಿದರು.

ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯನಿರ್ವಹಕ ಸಿಬ್ಬಂದಿಗಳಿಗೆ ಕಾಲ ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದರು.

ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ಪರಿಷತ್ ನಲ್ಲಿ ತಿಳಿಸಿದ ಸಚಿವ ಮುನಿಯಪ್ಪ ಅವರು ನ್ಯಾಯಬೆಲೆ ಅಂಗಡಿ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಿ ಪಡಿತರ ವಿತರಣೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ವಿವರಣೆ ನೀಡಿದರು.

ಪ್ರತಿ ಮಾಹೆ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿ ಆಹಾರ ಅದಾಲತ್ಗಳನ್ನು ನಡೆಸಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ಆಹಾರ ಜಾಗೃತ ದಳ ರಚಿಸಿ ಅಕ್ರಮಗಳ ಬಗ್ಗೆ ನಿಯಮಾನುಸಾರ ಕ್ರಮವಹಿಸಲಾಗುತ್ತಿದೆ ಎಂದರು.

Tags:
error: Content is protected !!