Mysore
27
few clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಇನ್ಫಿ ಸಹ ಸಂಸ್ಥಾಪಕ ಕ್ರಿಸ್‌ ಸೇರಿದಂತೆ 18 ಮಂದಿ ವಿರುದ್ಧ ಅಟ್ರಾಸಿಟಿ ಕೇಸ್‌

ಬೆಂಗಳೂರು: ಇನ್ಫೋಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣಮ್‌, ಐಐಎಸ್‌ಸಿ ಮಾಜಿ ನಿರ್ದೇಶಕ ಬಲರಾಮ್‌ ಸೇರಿದಂತೆ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ 71ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ಕೋರ್ಟ್‌ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೋವಿ ಸಮುದಾಯಕ್ಕೆ ಸೇರಿರುವ ದೂರುದಾರ ದುರ್ಗಪ್ಪ ಎಂಬುವವರು ಭಾರತೀಯ ವಿಜ್ಞಾನ ಸಂಸ್ಥೆಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಅಧ್ಯಾಪಕರಾಗಿದ್ದರು.

ಕಳೆದ 2014ರಲ್ಲಿ ತನ್ನನ್ನು ಹನಿ ಟ್ರ್ಯಾಪ್‌ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿ ವಜಾ ಮಾಡಲಾಗಿದೆ. ಅಷ್ಟೇ ಅಲ್ಲದೇ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿದಂತೆ 18 ಮಂದಿ 2008ರಿಂದ 2025ರವರೆಗೆ ಜಾತಿನಿಂದನೆ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ ಎಂದು ದೂರು ನೀಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದನ್‌ ರಂಗರಾಜನ್‌, ರಂಗರಾಜನ್‌ ಶ್ರೀಧರ್‌ ವಾರಿಯರ್‌, ಸಂಧ್ಯಾ, ವಿಶ್ವೇಶ್ವರಯ್ಯ, ಮನೋಹರನ್‌ ಸೇರಿದಂತೆ ಮತ್ತಿತರರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.

ಇನ್ನು ಕ್ರಿಸ್‌ ಗೋಪಾಲಕೃಷ್ಣನ್‌ ಅವರು ಐಎಸ್ಸಿಯ ಟ್ರಸ್ಟಿ ಸದಸ್ಯರಾಗಿರುವ ಕಾರಣ ಅವರ ಮೇಲೂ ಕೇಸ್‌ ದಾಖಲಾಗಿದೆ.

 

Tags:
error: Content is protected !!