ಬೆಂಗಳೂರು: ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣಮ್, ಐಐಎಸ್‌ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೋವಿ ಸಮುದಾಯಕ್ಕೆ ಸೇರಿರುವ ದೂರುದಾರ ದುರ್ಗಪ್ಪ ಎಂಬುವವರು ಭಾರತೀಯ ವಿಜ್ಞಾನ ಸಂಸ್ಥೆಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಅಧ್ಯಾಪಕರಾಗಿದ್ದರು.
ಕಳೆದ 2014ರಲ್ಲಿ ತನ್ನನ್ನು ಹನಿ ಟ್ರ್ಯಾಪ್ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿ ವಜಾ ಮಾಡಲಾಗಿದೆ. ಅಷ್ಟೇ ಅಲ್ಲದೇ ಕ್ರಿಸ್ ಗೋಪಾಲಕೃಷ್ಣನ್ ಸೇರಿದಂತೆ 18 ಮಂದಿ 2008ರಿಂದ 2025ರವರೆಗೆ ಜಾತಿನಿಂದನೆ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ ಎಂದು ದೂರು ನೀಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದನ್ ರಂಗರಾಜನ್, ರಂಗರಾಜನ್ ಶ್ರೀಧರ್ ವಾರಿಯರ್, ಸಂಧ್ಯಾ, ವಿಶ್ವೇಶ್ವರಯ್ಯ, ಮನೋಹರನ್ ಸೇರಿದಂತೆ ಮತ್ತಿತರರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.
ಇನ್ನು ಕ್ರಿಸ್ ಗೋಪಾಲಕೃಷ್ಣನ್ ಅವರು ಐಎಸ್ಸಿಯ ಟ್ರಸ್ಟಿ ಸದಸ್ಯರಾಗಿರುವ ಕಾರಣ ಅವರ ಮೇಲೂ ಕೇಸ್ ದಾಖಲಾಗಿದೆ.
ಮೈಸೂರು : ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…