ರಾಜ್ಯ

ಕೆಎಎಸ್‌ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯ: ಫೆ.18ಕ್ಕೆ ಕರವೇ ಬೃಹತ್‌ ಹೋರಾಟ

ಬೆಂಗಳೂರು: ಕೆಪಿಎಸ್‌ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ‌ ಫೆ.18ರಂದು ಬೆಂಗಳೂರಿನಲ್ಲಿ ದೊಡ್ಡ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಅನ್ಯಾಯಕ್ಕೆ ಒಳಗಾದ ಸಾವಿರಾರು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ‌. ಹಿಂದೆ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡಾನುವಾದದ ಸಮಸ್ಯೆ ಕಂಡುಬಂದಿದ್ದರಿಂದ ಆದ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಚಳವಳಿ ಹಮ್ಮಿಕೊಂಡಿತ್ತು. ನಮ್ಮ ಚಳವಳಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮರುಪರೀಕ್ಷೆಗೆ ಆದೇಶಿಸಿದ್ದರು. ಮುಖ್ಯಮಂತ್ರಿಗಳ ತೀರ್ಮಾನವನ್ನು ನಾವೆಲ್ಲ ಒಕ್ಕೊರಲಿನಿಂದ ಅಭಿನಂದಿಸಿದ್ದೆವು.

ಆದರೆ ಮರು ಪರೀಕ್ಷೆಯಲ್ಲೂ ಕನ್ನಡಾನುವಾದದ ಸಮಸ್ಯೆ ಉಂಟಾಗಿದೆ. ಹೋರಾಟದ ಸಂದರ್ಭದಲ್ಲಿ ನಾವು ಕನ್ನಡದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ, ನಂತರ ಅದನ್ನು ಇಂಗ್ಲಿಷ್‌ಗೆ ಅನುವಾದಿಸುವಂತೆ ಆಗ್ರಹಿಸಿದ್ದೆವು. ಕರ್ನಾಟಕದ ಆಡಳಿತ ಭಾಷೆ ಕನ್ನಡವಾದ್ದರಿಂದ ಇದೇ ಸಹಜವಾಗಿ ನಡೆಯಬೇಕಿತ್ತು. ಆದರೆ ದುರಂಹಕಾರಿ ಅಧಿಕಾರಿಗಳಿಂದಾಗಿ ಮತ್ತೆ ಇಂಗ್ಲಿಷ್ ನಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ, ಕನ್ನಡಕ್ಕೆ ತಪ್ಪುತಪ್ಪಾಗಿ ಅನುವಾದಿಸಲಾಗಿದೆ. ಇದರಿಂದಾಗಿ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ವಂಚನೆ ಎಸಗಲಾಗಿದೆ.

ಈಗ ಫಲಿತಾಂಶದಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ತೀರಾ ಕನಿಷ್ಟ ಪ್ರಮಾಣದಲ್ಲಿ ಉತ್ತೀರ್ಣರಾಗಿದ್ದಾರೆ ಎಂಬ ಮಾಹಿತಿ ಇದೆ. ಇದಕ್ಕೆ ಕೆಟ್ಟದಾಗಿ ಸಿದ್ಧಪಡಿಸಿದ ಕನ್ನಡಾನುವಾದದ ಪ್ರಶ್ನೆ ಪತ್ರಿಕೆಗಳೇ ಕಾರಣ ಎಂದು‌ ಕನ್ನಡ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಇವರೆಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಸಾಮಾಜಿಕವಾಗಿ ಹಿಂದುಳಿದ ಜನವರ್ಗಗಳಿಂದ ಬಂದವರು. ಇಂಥವರಿಗೆ ಅನ್ಯಾಯವಾಗುತ್ತಿದ್ದರೂ ಸರ್ಕಾರ ಮೌನವಾಗಿ ಕುಳಿತುಕೊಳ್ಳಲು ಹೇಗೆ ಸಾಧ್ಯ? ಎಂದು ಪ್ರಶ್ನೆ ಮಾಡಿದರು.

ಹಲವಾರು ವಿದ್ಯಾರ್ಥಿಗಳು ಪ್ರತಿನಿತ್ಯ ನನ್ನೊಂದಿಗೆ ಮಾತನಾಡುತ್ತಿದ್ದಾರೆ. ಅವರ ಸಂಕಟಗಳನ್ನು ಹೇಳುತ್ತಿದ್ದಾರೆ. ಅವರ ಭವಿಷ್ಯದ ಬದುಕು ಬೀದಿಗೆ ಬಿದ್ದಂತಾಗಿದೆ. ಎಷ್ಟೋ ವರ್ಷಗಳಿಂದ ಅವರು ಈ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದರು. ಇದಕ್ಕಾಗಿ ಅವರ ಪೋಷಕರೂ ತ್ಯಾಗ ಮಾಡಿದ್ದಾರೆ. ಈ ಪರೀಕ್ಷೆಯಲ್ಲಿ ಅವರು ಅನುತ್ತೀರ್ಣಗೊಂಡರೆ ಬಹುತೇಕರು ವಯೋಮಿತಿಯ ಕಾರಣಕ್ಕೆ ಮುಂದೆ ಇನ್ನೊಂದು ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ಯಾರೋ ದುಷ್ಟ ಅಧಿಕಾರಿಗಳು ಮಾಡಿದ ದ್ರೋಹಕ್ಕೆ ಅವರ ಬದುಕು ನರಕವಾಗಿದೆ.

ಪರೀಕ್ಷೆ ಬರೆದವರಿಗೆಲ್ಲ ಕೆಎಎಸ್ ಹುದ್ದೆಯೇನು ಲಭಿಸುವುದಿಲ್ಲ. ಆದರೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳನ್ನು ಬೇಕೆಂದೇ ತಪ್ಪುತಪ್ಪಾದ ಪ್ರಶ್ನೆ ಪತ್ರಿಕೆ ಕೊಟ್ಟು ಅಂಕಗಳಿಸಿದಂತೆ ತಡೆಯಲಾಯಿತು ಎಂಬ ಅನ್ಯಾಯ ಪ್ರಜ್ಞೆ ಅವರನ್ನು ಕೊನೆಯವರೆಗೂ ಬಾಧಿಸಲಿದೆ. ಅಧಿಕಾರಿಗಳಾಗುವ ನಮ್ಮ ಆಸೆಗೆ ರಾಜ್ಯ ಸರ್ಕಾರವೇ ತಣ್ಣೀರೆರಚಿತು, ನಮಗೆ ಮೋಸ ಮಾಡಿತು ಎಂದು ಅವರು ಭಾವಿಸುತ್ತಾರೆ. ಇದು ಬೇಕಾಗಿರಲಿಲ್ಲ. ಇದಕ್ಕೆ ನೇರವಾಗಿ ಕೆಪಿಎಸ್ ಸಿ ಮತ್ತು ರಾಜ್ಯ ಸರ್ಕಾರವೇ ಹೊಣೆ. ಇದನ್ನು ಸರಿಪಡಿಸುವ ಜವಾಬ್ದಾರಿಯನ್ನೂ ಸರ್ಕಾರವೇ ಹೊರಬೇಕಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹಿಂದೆ ಮಾಡಿದಂತೆ ಕೂಡಲೇ ಮಧ್ಯೆ ಪ್ರವೇಶಿಸಿ ಕೂಡಲೇ ಫಲಿತಾಂಶವನ್ನು ತಡೆಹಿಡಿಯಬೇಕು, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು ಪರಿಹಾರ ಸೂತ್ರವನ್ನು ರೂಪಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಮೊಕದ್ದಮೆ ಹೂಡಿ ಜೈಲಿಗಟ್ಟಬೇಕು. ಫೆ.18ರಂದು ನಡೆಯುವ ಸಾಂಕೇತಿಕ ಪ್ರತಿಭಟನೆಯಲ್ಲೇ ಹತ್ತಾರು ಸಾವಿರ ಮಂದಿ ನೆರೆಯುತ್ತಿದ್ದಾರೆ. ಅನ್ಯಾಯ ಸರಿಪಡಿಸದೇ ಹೋದಲ್ಲಿ ಅದರ ಪರಿಣಾಮ ಗಂಭೀರವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

3 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

3 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

3 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

6 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

6 hours ago