ರಾಜ್ಯ

ಮೈಸೂರು, ಚಾಮರಾಜನಗರ ಜಿಲ್ಲೆಗೆ ವಿನೂತನ ಆ್ಯಂಬುಲೆನ್ಸ್‌ ಸೇವೆ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಮೈಸೂರು, ಚಾಮರಾಜನಗರ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಕಡ್ಡಾಯವಾಗಿ ಎರಡು ಆ್ಯಂಬುಲೆನ್ಸ್‌ಗಳನ್ನು ಒದಗಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಸದಸ್ಯ ಡಾ.ಯತೀಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ವ್ಯಾಪ್ತಿಗೆ ಬರುವ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಕ್ಕೂ ಆ್ಯಂಬುಲೆನ್ಸ್ ಒದಗಿಸಲು ಸಂಬಂಧಪಟ್ಟವರಿಗೆ ಸೂಚಿಸಿದ್ದೇವೆ. ಅಲ್ಲದೆ ಈ ಎರಡೂ ಜಿಲ್ಲೆಗಳಿಗೆ ಅಡ್ವಾನ್ಸ್ ಲೈಫ್‌ ಸಪೋರ್ಟ್‌ ಎಂಬ ವಿನೂತನ ಹಾಗೂ ಆಧುನಿಕ ಸೌಲಭ್ಯವುಳ್ಳ ಆ್ಯಂಬುಲೆನ್ಸ್‌ಳನ್ನು ಒದಗಿಸುತ್ತೇವೆ ಎಂದರು.

ಈ ಆ್ಯಂಬುಲೆನ್ಸ್‌ಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳು ಇರಲಿವೆ. ಗಾಯಾಳು ಇಲ್ಲವೇ ಇತರೆ ಯಾವುದಾದರೂ ಕಾಯಿಲೆಯಿಂದ ಬಳಲುತ್ತಿದ್ದರೆ ತಕ್ಷಣವೇ ಚಿಕಿತ್ಸೆ ಕೊಡಿಸಲು ಅನುಕೂಲವಾಗುವಂತೆ ಆ್ಯಂಬುಲೆನ್ಸ್‌ನಲ್ಲಿ ಸೌಲಭ್ಯಗಳನ್ನು ಒದಗಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿಗೆ ಪ್ರತ್ಯೇಕವಾಗಿ ಟ್ರಾಮಾ ಕೇಂದ್ರ ಸ್ಥಾಪನೆ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ನಮ ನಿಯಮಾವಳಿ ಪ್ರಕಾರ ಪ್ರತ್ಯೇಕವಾಗಿ ಇದನ್ನು ಸ್ಥಾಪನೆ ಮಾಡಲು ಅವಕಾಶವಿಲ್ಲ.

ಇರುವ ಕಟ್ಟಡದಲ್ಲೇ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿ ನಿರ್ವಹಣೆ ಮಾಡಲು ಸೂಚಿಸಬಹುದು. ಪ್ರತ್ಯೇಕ ಕಟ್ಟಡ ಬೇಕು ಎಂದರೆ ಆರ್ಥಿಕ ಹೊರೆ, ಸಿಬ್ಬಂದಿ ಹೊರೆ ಬೀಳುತ್ತದೆ. ಇರುವ ಕಟ್ಟಡಗಳಲ್ಲೇ ಇದನ್ನು ನಿರ್ವಹಣೆ ಮಾಡಲು ಸೂಚನೆ ನೀಡಲಾಗುವುದು.

ಒಂದು ವೇಳೆ ನಂಜನಗೂಡಿಗೆ ಪ್ರತ್ಯೇಕವಾದ ಟ್ರಾಮಾ ಕೇಂದ್ರ ಬೇಕು ಎಂದರೆ ಅಧಿಕಾರಿಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಲು ಸೂಚಿಸಲಾಗುವುದು ಎಂದು ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಡಾ.ಯತೀಂದ್ರ, ನಂಜನಗೂಡಿಗೆ ಪ್ರತ್ಯೇಕವಾಗಿ ಟ್ರಾಮಾ ಕೇಂದ್ರ ಸ್ಥಾಪಿಸಬೇಕೆಂದು ಮನವಿ ಮಾಡಿದರು.

ಅಪಘಾತ, ಇಲ್ಲವೇ ಬೇರೆ ಘಟನೆಗಳು ಸಂಭವಿಸಿದರೆ ನಂಜನಗೂಡಿನಿಂದ ಮೈಸೂರಿಗೆ ಹೋಗಲು ದೂರವಾಗುತ್ತದೆ. ಹೀಗಾಗಿ ಪ್ರತ್ಯೇಕ ಟ್ರಾಮಾ ಕೇಂದ್ರ ಸ್ಥಾಪಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಕಣಿವೆಗೆ ಉರುಳಿದ ಸೇನಾ ವಾಹನ : 10 ಸೈನಿಕರ ಸಾವು

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…

11 mins ago

‘ಬಿಗ್ ಬಾಸ್’ ಗಿಲ್ಲಿಗೆ ಸಿಎಂ ಅಭಿನಂದನೆ!

ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…

17 mins ago

ಬೆಳ್ಳಿ ಬರೋಬ್ಬರಿ 20 ಸಾವಿರ ರೂ.ಇಳಿಕೆ : ಚಿನ್ನದ ದರದಲ್ಲೂ ದಿಢೀರ್ 4 ಸಾವಿರ ರೂ ಕುಸಿತ

ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…

28 mins ago

ಟಿವಿಕೆ ವಿಜಯ್ ಪಕ್ಷಕ್ಕೆ ಸೀಟಿ ಗುರುತು ನೀಡಿದ ಆಯೋಗ

ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…

1 hour ago

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

1 hour ago

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ ಇರಲಿದೆ : ಸಿಎಂ

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…

1 hour ago