Mysore
20
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

4 ಲಕ್ಷ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌

ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಗೋವಿಂದರಾಜು, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಹಣವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದರು.

ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್‌ ಅಧಿಕಾರಿ ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಪೊಲೀಸ್‌ ಕಮಿಷನರ್‌ ಸೀಮಂತ್‌ ಸಿಂಗ್‌ ಆದೇಶ ಹೊರಡಿಸಿದ್ದಾರೆ.

 

Tags:
error: Content is protected !!