ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗೋವಿಂದರಾಜು, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಹಣವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದರು.
ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಪೊಲೀಸ್ ಕಮಿಷನರ್ ಸೀಮಂತ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…