ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಇನ್‌ಸ್ಪೆಕ್ಟರ್ ಮಹಮ್ಮದ್ ರಫೀ ನಿಧನ

ಮೈಸೂರು: ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ರಾಜ್ಯ ಕ್ರೈಮ್ ರೆಕಾರ್ಡ್ಸ್ ಬ್ಯೂರೋ ಇನ್‌ಸ್ಪೆಕ್ಟರ್‌ ಮಹಮ್ಮದ್ ರಫೀ ಗುರುವಾರ ನಿಧನರಾದರು.

ಅವರಿಗೆ ಐವತ್ತು ವರ್ಷ ವಯಸ್ಸಾಗಿತ್ತು. ರಫೀ ಅವರು ಪತ್ನಿ ಫರ್ಜಾನಾ ಬೇಗಂ ಹಾಗೂ ಪುತ್ರ ಮಹಮ್ಮದ್ ರಾಹಿಲ್ ಮತ್ತು ಕುಟುಂಬವರ್ಗದವರನ್ನು ಅಗಲಿದ್ದಾರೆ. ಇಲಾಖೆಯ ಅನೇಕ ವಿಭಾಗಗಳಲ್ಲಿ ಸೇವೆ ಸಲ್ಲಿಸಿ ಉತ್ತಮ ಹೆಸರು ಸಂಪಾದಿಸಿದ್ದ ರಫೀ ಅವರಿಗೆ ಇತ್ತೀಚೆಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿತ್ತು. ರಫೀ ಅವರು ಅಪರಾಧಗಳನ್ನು ಪತ್ತೆ ಮಾಡುತ್ತಿದ್ದ ಧೈರ್ಯ ಮತ್ತು ವೈಖರಿಯನ್ನು ಮೆಚ್ಚಿ ಇಲಾಖೆಯು ಅನೇಕ ಪ್ರಶಸ್ತಿಗಳನ್ನು ನೀಡಿ ಪ್ರೋತ್ಸಾಹಿಸಿತ್ತು.

ಮೃತರ ಅಂತ್ಯಕ್ರಿಯೆ ಶುಕ್ರವಾರ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

× Chat with us