ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ.
ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿರುವ ಸ್ನೇಹಮಯಿ ಕೃಷ್ಣ ಅವರು, ಎಲ್ಲಾ ಸರ್ಕಾರಿ ಕಚೇರಿಗಳು, ಹಿರಿಯ ಅಧಿಕಾರಿಗಳ ಕಚೇರಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ. ಕಚೇರಿಗಳಲ್ಲಿ ಕೆಲಸ ನಿರ್ವಹಿಸುವ ಮಹಿಳಾ ಸಿಬ್ಬಂದಿ, ಸಾರ್ವಜನಿಕ ಮಹಿಳೆಯರ ಜೊತೆ ಅಸಭ್ಯವಾಗಿ ನಡೆಸುಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಲು ಸರ್ಕಾರಿ ಕಚೇರಿ, ಹಿರಿಯ ಅಧಿಕಾರಿಗಳ ಕಚೇರಿಯಲ್ಲಿ ಕ್ಯಾಮೆರಾ ಅಳವಡಿಸಿ. ಈ ಮೂಲಕ ಮಹಿಳೆಯರ ಮೇಲಿನ ದೌರ್ಜನ್ಯ ತಪ್ಪಿಸಲು ಸಾಧ್ಯವಾಗುತ್ತದೆ. ಕೆಲವು ಮಹಿಳಾ ಸಿಬ್ಬಂದಿ ದೌರ್ಜನ್ಯವಾದರು ಮಾನ ಮರ್ಯಾದೆಗೆ ಹೆದರಿ ದೂರು ನೀಡಲ್ಲ. ಆದ್ದರಿಂದ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ.





