Mysore
24
overcast clouds

Social Media

ಶನಿವಾರ, 04 ಏಪ್ರಿಲ 2026
Light
Dark

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ

ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ.

ಕಳೆದ ಹಲವು ತಿಂಗಳುಗಳಿಂದ ವಾಹನ ಸವಾರರಲ್ಲಿ ಗೊಂದಲ ಮತ್ತು ಆತಂಕ ಸೃಷ್ಟಿಸಿದ್ದ HSRP ಅಳವಡಿಕೆಯ ಕಡ್ಡಾಯ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ. ಹಳೆಯ ವಾಹನಗಳಿಗೆ HSRP ಪ್ಲೇಟ್ ಅಳವಡಿಸಲು ಸರ್ಕಾರ ಈ ಹಿಂದೆ ಏಳು ಬಾರಿ ಗಡುವು ವಿಸ್ತರಿಸಿದ್ದರೂ ಸಾರ್ವಜನಿಕರಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಬಾರದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು, “ಸಾರ್ವಜನಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇನ್ನು ಮುಂದೆ ಹಳೆಯ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯವಿರುವುದಿಲ್ಲ” ಎಂದು ಹೇಳಿದರು.

ಪ್ರಸ್ತುತ ಹೊಸ ವಾಹನಗಳಿಗೆ ಮಾತ್ರ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.

Tags:
error: Content is protected !!