ರಾಜ್ಯ

ರಾಜ್ಯ ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್ ಕೊಟ್ಟ ಆಹಾರ ಇಲಾಖೆ: ಏನದು ಗೊತ್ತಾ?

ಬೆಂಗಳೂರು: ರಾಜ್ಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ಸರಬರಾಜು ಇಲಾಖೆ ಗುಡ್‌ನ್ಯೂಸ್‌ ನೀಡಿದ್ದು, ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಆಹಾರದ ಕಿಟ್‌ ನೀಡಲು ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಅಧಿಕಾರಕ್ಕೆ ಬಂದ ನಂತರ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ನೀಡಿ, ಉಳಿದ 5 ಕೆಜಿ ಅಕ್ಕಿಗೆ ಹಣವನ್ನು ಖಾತೆಗೆ ವರ್ಗಾವಣೆ ಮಾಡುತ್ತಿತ್ತು.

ನಂತರದ ದಿನಗಳಲ್ಲಿ ಅಂದರೆ ಈಗ ಹಣದ ಬದಲಾಗಿ 5 ಕೆಜಿ ಹೆಚ್ಚುವರಿ ಅಕ್ಕಿಯನ್ನೇ ನೀಡುತ್ತಿದೆ. ಇದೀಗ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಆಹಾರದ ಕಿಟ್‌ ನೀಡಲು ಆಹಾರ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆಹಾರದ ಕಿಟ್‌ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀಪುಡಿ, ಅಡುಗೆ ಎಣ್ಣೆ, ಗೋಧಿ ಇರಲಿದ್ದು, ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದರೆ ಮಾತ್ರ ವಿತರಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಜುಲೈ.2ರಂದು ಚಿಕ್ಕಬಳ್ಳಾಪುರ ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಇದಕ್ಕೆ ಸಮ್ಮತಿ ಸಿಕ್ಕಿದರೆ ಸದ್ಯದಲ್ಲೇ ಆಹಾರ ಕಿಟ್‌ ನೀಡುವ ಯೋಜನೆ ಜಾರಿಗೆ ಬರುವ ಸಾಧ್ಯತೆಯಿದೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

4 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

5 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

5 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

8 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

10 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

11 hours ago