ರಾಜ್ಯ

ಬಿಜೆಪಿಯವರು ಬರ ಅಧ್ಯಯನ ಬದಲು ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಕೊಡಿಸಲಿ: ಸಿಎಂ

ಬೆಂಗಳೂರು : ಬಿಜೆಪಿಯವರು ರಾಜಕೀಯವಾಗಿ ಬರ ಅಧ್ಯಯನ ಮಾಡುವ ಬದಲು ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರದಿಂದ ಅಧಿಕಾರಿಗಳ ತಂಡ ಬಂದು ರಾಜ್ಯದಲ್ಲಿ ಅಧ್ಯಯನ ನಡೆಸಿದೆ. ನಾವು ಕೂಡ ಅಧ್ಯಯನ ನಡೆಸಿದ್ದೇವೆ. ಕೇಂದ್ರದ ತಂಡ ಈವರೆಗೂ ವರದಿ ನೀಡಿಲ್ಲ ಎಂದು ಹೇಳಿದರು.

ಬಿಜೆಪಿಯವರು ಪದೇ ಪದೇ ಅಧ್ಯಯನ ಮಾಡುತ್ತೇವೆ ಎಂದು ಹೇಳುವ ಬದಲು ಕೇಂದ್ರದ ಬಳಿಗೆ ಹೋಗಿ ರಾಜ್ಯಕ್ಕೆ ಬರ ಪರಿಹಾರ ಕೊಡಿಸಲಿ. ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ 33,700 ಕೋಟಿ ರೂ. ನಷ್ಟವಾಗಿದೆ. 17900 ಕೋಟಿ ರೂ.ಗಳ ಪರಿಹಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಬಿಜೆಪಿಯ 25 ಮಂದಿ ಸಂಸದರಿದ್ದಾರೆ. ಅವರು ಕೇಂದ್ರದ ಮೇಲೆ ಪ್ರಭಾವ ಬೀರಿ ಹಣಕೊಡಿಸಬೇಕು. ಅದರೆ ಹೊರತಾಗಿ ರಾಜಕೀಯ ಕಾರಣಕ್ಕೆ ಬರ ಅಧ್ಯಯನ ಮಾಡುವುದಾದರೆ ನಮ್ಮ ತಕರಾರು ಇಲ್ಲ ಎಂದರು.

ಬರ ಅಧ್ಯಯನ ವೈಜ್ಞಾನಿಕವಾಗಿ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು, ಅಧ್ಯಯನ ನಡೆಸಿದ್ದು ಕೇಂದ್ರ ಅಧಿಕಾರಿಗಳ ತಂಡ. ಕೇಂದ್ರದಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ ಎಂದು ಗೊತ್ತಿದೆ. ಕುಮಾರಸ್ವಾಮಿ ಅವರು ವೈಜ್ಞಾನಿಕವಾಗಿ ಅಧ್ಯಯನ ನಡೆದಿಲ್ಲ ಎನ್ನುವುದಾದರೆ ಕೇಂದ್ರ ಸರ್ಕಾರವನ್ನು ಟೀಕೆ ಮಾಡಲಿ ಎಂದು ತಿರುಗೇಟು ನೀಡಿದರು.

ಮಾಜಿ ಸಂಸದ ಡಿ.ಬಿ.ಚಂದ್ರೇಗೌಡ ನಿಧನಕ್ಕೆ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದರು. ಹಿರಿಯ ಹಾಗೂ ಬುದ್ದಿವಂತ ರಾಜಕಾರಣಿಯಾಗಿದ್ದ ಚಂದ್ರೇಗೌಡರು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಇಂದಿರಾಗಾಂಧಿ ಅವರಿಗಾಗಿ ಬಿಟ್ಟುಕೊಟ್ಟಿದ್ದರು. ಆನಂತರ ಜನತಾದಳಕ್ಕೆ ಬಂದರು . ಸ್ಪೀಕರ್ ಮತ್ತು ವಿರೋಧ ಪಕ್ಷದ ನಾಯಕರಾಗಿದ್ದರು. ಮರಳಿ ಕಾಂಗ್ರೆಸ್ ಸೇರಿದ ಚಂದ್ರೇಗೌಡರು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಬಿಜೆಪಿಗೆ ಹೋದ ಬಳಿಕ ಸಂಸದರಾಗಿ ಆಯ್ಕೆಯಾಗಿದ್ದರು.

ಸಾಹಿತ್ಯದ ಬಗ್ಗೆ ಅಪಾರ ತಿಳುವಳಿಕೆಯುಳ್ಳವರಾಗಿದ್ದರು. ಅವರ ನಿಧನದಿಂದಾಗಿ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ನಾಳೆ ಮೂಡಿಗೆರೆಯಲ್ಲಿ ನಡೆಯುವ ಅಂತ್ಯಕ್ರಿಯೆಯಲ್ಲಿ ತಾವು ಭಾಗವಹಿಸುವುದಾಗಿ ತಿಳಿಸಿದರು.

andolanait

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

16 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

17 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

18 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

18 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

18 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

22 hours ago