ರಾಜ್ಯ

ಒಳಮೀಸಲಾತಿ: ನ್ಯಾ. ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ

ಬೆಂಗಳೂರು: ಒಳಮೀಸಲಾತಿ ಕಲ್ಪಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ರವರ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿರುವುದಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು.

ಇಂದು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಕುರಿತು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಸಚಿವರ ಹೆಚ್.ಸಿ. ಮಹಾದೇವಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ ಪಾಟೀಲ್ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿ ಸಿದ್ದಪಡಿಸಬೇಕು. ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿ ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವರ್ಗೀಕರಣಗೊಳಿಸಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿರುವ ಬಗ್ಗೆ ಸಚಿವರು ವಿವರಿಸಿದರು.

ನಾಗಮೋಹನ್ ದಾಸ್ ಆಯೋಗದವರ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಇಂದು ಅಂಗೀಕರಿಸಿದೆ. ಸಮೀಕ್ಷಾ ಕಾರ್ಯವನ್ನು 60 ದಿನದೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ  ಅವಧಿಯನ್ನು ಎರಡು ತಿಂಗಳವೆರೆಗೆ ವಿಸ್ತರಿಸಲಾಗಿದೆ ಎಂದು  ತಿಳಿಸಿದರು.

ಸಮಿತಿಯ ಶಿಫಾರಸ್ಸುಗಳ ವಿಷಯಗಳ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ 6,000 ಪಂಚಾಯತಿ ಹಾಗೂ 300 ಕ್ಕೂ ಹೆಚ್ಚು ವಾರ್ಡ್‌ಗಳಿವೆ. ಈ ಕಾರ್ಯವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಉಸ್ತುವಾರಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ತೀವ್ರಗತಿಯಲ್ಲಿ ಕೈಗೊಳ್ಳಲು ಸಚಿವ ಸಂಪುಟ ಸೂಚನೆ ನೀಡಿದೆ. ಮುಂದೆ ಯಾವುದೇ ಗೊಂದಲಗಳಾಗದಂತೆ ದತ್ತಾಂಶಗಳು ಕರಾರುವಕ್ಕಾಗಿ ಪಡೆಯಲು ಹಾಗೂ ಜನರಿಗೆ ಮೀಸಲಾತಿಯ ಅನುಕೂಲ ಕಲ್ಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಸಚಿವರು ತಿಳಿಸಿದರು.

ಹಿಂದೆ ನಡೆಸಿರುವ  ಜಾತಿಗಣತಿ ವರದಿಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ, ಎಸ್‌ಸಿ ವರ್ಗಗಳ ಮಾಹಿತಿಗಳು ವರದಿಯಲ್ಲಿ ಇರುವುದಿಲ್ಲ. ಈ ದತ್ತಾಂಶಗಳಿಲ್ಲದೇ ಹೋದರೆ ಕಾನೂನಿನಡಿ ಮಾನ್ಯವಾಗಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಎರಡು ತಿಂಗಳ ಕಾಲಾವಧಿಯಲ್ಲಿ ಹೊಸ ಸಮೀಕ್ಷೆ ಮಾಡಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

37 mins ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

41 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

44 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

48 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

57 mins ago