ರಾಜ್ಯ

ಒಳ ಮೀಸಲಾತಿ : ಜಾತಿ ಸಮೀಕ್ಷೆ ದಿನಾಂಕ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ಆರಂಭವಾಗಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷಾ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

ಮನೆ-ಮನೆ ಭೇಟಿ ನೀಡಿ ಮಾಡುವ ಸಮೀಕ್ಷೆ ದಿನಾಂಕವನ್ನು ಮೇ 25ರವರೆಗೆ, ಬ್ಲಾಕ್ ವ್ಯಾಪ್ತಿಯಲ್ಲಿ ನಡೆಯುವ ಸಮೀಕ್ಷೆಯ ವಿಶೇಷ ಶಿಬಿರದ ದಿನಾಂಕವನ್ನು ಮೇ 26ರಿಂದ ಮೇ 28ರ ವರೆಗೆ ಹಾಗೂ ಆನ್‍ಲೈನ್ ಮೂಲಕ ಸ್ವಯಂ ಘೋಷಣೆ ಮಾಡುವ ದಿನಾಂಕವನ್ನು ಮೇ 19ರಿಂದ ಮೇ 28ರ ವರೆಗೆ ವಿಸ್ತರಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪರಿಶಿಷ್ಟ ಜಾತಿ/ ಉಪಜಾತಿಗಳ ಸಮಗ್ರ ಸಮೀಕ್ಷೆ-2025ರ ಕುರಿತು ಒಳಮೀಸಲಾತಿಯ ಏಕ ಸದಸ್ಯ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ್ ದಾಸ್ ಅವರು, ಶಾಸಕರು, ಹಲವು ಸಂಘ ಸಂಸ್ಥೆಗಳು ಸಮೀಕ್ಷೆ ವೇಳೆ ಉದ್ಭವಿಸಿರುವ ಕೆಲವೊಂದು ಸಮಸ್ಯೆಗಳನ್ನು ಸರಿಪಡಿಸಲು ಸಮೀಕ್ಷಾ ದಿನಾಂಕವನ್ನು ವಿಸ್ತರಿಸಲು ಕೋರಿದ್ದವು. ಈ ಹಿನ್ನೆಲೆಯಲ್ಲಿ ವಿಸ್ತರಣೆ ಮಾಡಲಾಗಿದೆ ಎಂದರು.

ವಿಸ್ತರಿಸಲಾದ ಅವಧಿಯಲ್ಲಿ ಪರಿಶಿಷ್ಟ ಜಾತಿಯವರೆಲ್ಲರೂ ಜಾತಿ ಸಮೀಕ್ಷೆಯಲ್ಲಿ ತಪ್ಪದೇ ಭಾಗವಹಿಸಿ ತಮ್ಮ ಜಾತಿಯ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡುವ ಮೂಲಕ ಸಹಕಾರ ನೀಡಬೇಕು ಎಂದು ಅವರು ಹೇಳಿದರು.

ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಹೊಸದಾದ ಸಮೀಕ್ಷೆ ನಡೆಸಲು ಮಾ.27ರಂದು ಆಯೋಗ ಮಧ್ಯಂತರ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಅದರಂತೆ ಪರಿಶಿಷ್ಟ ಜಾತಿಯ ಮೂಲ ಜಾತಿಗಳ ಜನಸಂಖ್ಯೆ, ಕುಟುಂಬಗಳ ಸಂಖ್ಯೆ, ಅವರು ಪಡೆದಿರುವ ಶಿಕ್ಷಣ, ವೃತ್ತಿ, ವಾಸಿಸುವ ಪ್ರದೇಶ, ಹೊಂದಿರುವ ಮೂಲಸೌಲಭ್ಯಗಳು, ಆದಾಯ, ಸರ್ಕಾರದಿಂದ ಪಡೆದಿರುವ ಸೌಲಭ್ಯಗಳು, ರಾಜಕೀಯ ಪ್ರಾತಿನಿಧ್ಯ ಮೊದಲಾದ ಸಮಗ್ರವಾದ ಮಾಹಿತಿಯನ್ನು ಒಳಗೊಂಡ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಮೇ 5ರಿಂದ ಈಗಾಗಲೇ ಮನೆ-ಮನೆ ಸಮೀಕ್ಷೆ ಆರಂಭಿಸಿದ್ದು, ಆಧುನಿಕ ತಂತ್ರಜ್ಞಾನದ ಸಾಧನಗಳನ್ನು ಬಳಸಿಕೊಂಡು ಮೋಬೈಲ್ ಆಪ್ ಮೂಲಕ ಸಮೀಕ್ಷೆ ಮಾಡಲಾಗುತ್ತಿದೆ. ಮನೆ, ಮನೆ ಸಮೀಕ್ಷೆಗೆ 65,115 ಗಣತಿದಾರರು ಮತ್ತು 5,625 ಮೇಲ್ವಿಚಾರಕರಿಗೆ ತರಬೇತಿ ನೀಡಲಾಗಿದೆ ಎಂದು ಅವರು ತಿಳಿಸಿದರು.

2011ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿ ಕುಟುಂಬಗಳ ಸಂಖ್ಯೆ 21,40,304 ಆಗಿದೆ. 2025ರ ಸಾಲಿಗೆ 25,72,050 ಆಗಬಹುದು ಎಂದು ಅಂದಾಜಿಸಲಾಗಿದೆ. ಮೇ 15ರ ಅಂತ್ಯಕ್ಕೆ ಶೇ.73.72ರಷ್ಟು ಮನೆ-ಮನೆ ಸಮೀಕ್ಷೆಯಲ್ಲಿ ಪ್ರಗತಿ ಸಾಧಿಸಲಾಗಿದೆ. ರಾಜ್ಯದ 31 ಜಿಲ್ಲೆಗಳಲ್ಲಿ 18,41,258 ಎಸ್ಸಿ ಕುಟುಂಬಗಳ ಸಮೀಕ್ಷೆ ಮಾಡಿದ್ದು, ಎಸ್ಸಿ ಅಲ್ಲದ 9706233 ಕುಟುಂಬಗಳ ಸಮೀಕ್ಷೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 55,027 ಎಸ್ಸಿ ಕುಟುಂಬಗಳ ಹಾಗೂ ಎಸ್ಸಿ ಅಲ್ಲದೆ 13,26,323 ಕುಟುಂಬಗಳ ಸಮೀಕ್ಷೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 18,96,285 ಎಸ್ಸಿ ಕುಟುಂಬಗಳ ಸಮೀಕ್ಷೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆ ಕುಂಠಿತ : ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರ ಕೊರತೆಯಿಂದ ಸಮೀಕ್ಷೆ ಕುಂಠಿತವಾಗಿದೆ. ಸಮರ್ಪಕವಾಗಿ ಸಮೀಕ್ಷೆಯನ್ನು ಕೈಗೊಳ್ಳಲು ಸಮರ್ಥರಿರುವ ಪದವಿ ಹೊಂದಿದ ಆಶಾ ಕಾರ್ಯಕರ್ತೆಯರನ್ನು ಅಥವಾ ಅಂಗನವಾಡಿ ಕಾರ್ಯಕರ್ತೆಯರನ್ನು ಗಣತಿದಾರರನ್ನಾಗಿ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ, ಎರಡನೇ ಹಂತದ ತರಬೇತಿ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸಮೀಕ್ಷೆ ಬಗ್ಗೆ ಸಾಕಷ್ಟು ಜಾಹೀರಾತು ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಸಹಾಯವಾಣಿ 9481359000 ಸ್ಥಾಪಿಸಲಾಗಿದೆ ಎಂದರು.

ರಾಜ್ಯದಲ್ಲಿ 2011ರ ಜನಗಣತಿ ಹಾಗೂ ಇಲ್ಲಿಯವರೆಗೆ ನಡೆದಿರುವ ಸಮೀಕ್ಷೆ/ ಜನಗಣತಿಯಲ್ಲಿ ಶೇ.43 ರಷ್ಟು ಪರಿಶಿಷ್ಟ ಜಾತಿಯ ಸಮುದಾಯದವರು ಆದಿ ಆಂಧ್ರ, ಆದಿ ಕರ್ನಾಟಕ ಮತ್ತು ಆದಿ ದ್ರಾವಿಡ ಎಂಬುದಾಗಿ ಬರೆಸಿದ್ದರು. ಈ ಮೂರು ಜಾತಿಗಳಲ್ಲಿ ಅನೇಕ ಮೂಲ ಜಾತಿಗಳು ಸೇರಿಕೊಂಡಿರುವುದರಿಂದ ಪರಿಶಿಷ್ಟ ಜಾತಿಗಳ ವೈಜ್ಞಾನಿಕ ಉಪ ವರ್ಗೀಕರಣಕ್ಕೆ ಅಡ್ಡಿಯಾಗಿರುತ್ತದೆ. ಸಮೀಕ್ಷೆ ಮಾಡುವಾಗ ಮೊದಲ ಪ್ರಶ್ನೆ ನಿಮ ಜಾತಿ ಹೆಸರು ಹೇಳಿ ಎಂದು ಕೇಳುತ್ತೇವೆ. ಅವರು ಆದಿ ಕರ್ನಾಟಕ ಎಂದು ಹೇಳಿದರೆ, ಮೂಲ ಜಾತಿ ಏನೆಂದು ಕೇಳಲಾಗುವುದು ಎಂದು ವಿವರಿಸಿದರು.

 

 

ಆಂದೋಲನ ಡೆಸ್ಕ್

Recent Posts

ನಾಯಕತ್ವ ಬದಲಾವಣೆ ವಿಚಾರ: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…

7 mins ago

ರೈತರಿಗೆ, ಜನರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ: ಸಚಿವ ಕೆ.ವೆಂಕಟೇಶ್‌

ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…

17 mins ago

ಕಣ್ಣೂರು| ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು

ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ…

30 mins ago

ಜನವರಿ.29ರಿಂದ ಫೆಬ್ರವರಿ.06ರವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ…

52 mins ago

ಕಾಂಗ್ರೆಸ್‌ ಹೈಕಮಾಂಡ್‌ ಯಾರು ಅನ್ನೋದೆ ಗೊತ್ತಿಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕಲಬುರ್ಗಿ: ಕಾಂಗ್ರೆಸ್‌ ಹೈಕಮಾಂಡ್‌ ಯಾರು ಅನ್ನೋದೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ…

1 hour ago

ಚಾಮರಾಜನಗರ: ನಂಜೆದೇವಪುರ ಸುತ್ತಮುತ್ತ ಹುಲಿಗಳಿಗಾಗಿ ಶೋಧ ಕಾರ್ಯ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…

2 hours ago