Mysore
27
clear sky

Social Media

ಗುರುವಾರ, 29 ಜನವರಿ 2026
Light
Dark

ಒಳ ಮೀಸಲಾತಿ ಆದೇಶ | ನೇಮಕಾತಿ ಪ್ರಕ್ರಿಯೆ ಬಗ್ಗೆ ಗ್ರೀನ್‌ ಸಿಗ್ನಲ್‌ ಕೊಟ್ಟ ಸಿಎಂ

cm siddaramaiah

ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಬುಧವಾರ ಹೇಳಿಕೆ ನೀಡಿ, ಸಮಾನತೆಯ ತತ್ವಕ್ಕೆ ಯಾವುದೇ ಚ್ಯುತಿ ಬಾರದಂತೆ ಅದರ ಮೂಲ ಆಶಯವನ್ನು ಸದೃಢಗೊಳಿಸುವ ದೃಷ್ಟಿಯಿಂದ ಒಳ ಮೀಸಲಾತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ನಿವೃತ್ತ ನ್ಯಾಯಮೂರ್ತಿ .ಎನ್. ನಾಗಮೋಹನ ದಾಸ್ ಅವರ ಆಯೋಗವು ರಾಜ್ಯದ ೧೦೧ ಪರಿಶಿಷ್ಟ ಜಾತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಸಲ್ಲಿಸಿದ್ದ ಶಿಫಾರಸುಗಳನ್ನು ಮಂಗಳವಾರ (ಆ.೧೯) ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ ಎಂದು ತಿಳಿಸಿದರು.

ಎಡಗೈ ಸಂಬ೦ಧಿತ ಜಾತಿಗಳೆಂದು ಆಯೋಗವು ಗುರುತಿಸಿರುವ ಸಮುದಾಯಗಳಿಗೆ ಶೇ.೬ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ. ಆಯೋಗವು ಪರಯ, ಮೊಗೇರ ಮುಂತಾದ ಬಲಗೈ ಸಂಬ೦ಧಿತ ಜಾತಿಗಳನ್ನು ಎಡಗೈ ಸಂಬ೦ಧಿತ ಜಾತಿಗಳ ಜೊತೆ ಸೇರಿಸಲಾಗಿದೆ ಎಂಬುದನ್ನು ಗಮನಿಸಿದ ಸಚಿವ ಸಂಪುಟವು ಈ ಜಾತಿಗಳನ್ನು ಬಲಗೈ ಸಂಬ೦ಧಿತ ಜಾತಿಗಳ ಜೊತೆ ಸೇರಿಸಿ ಬಲಗೈ ಸಂಬ೦ಧಿತ ಜಾತಿಗಳ ಸಮೂಹಕ್ಕೆ ಶೇ.೬ ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಿತು ಎಂದು ಸದನದಲ್ಲಿ ವಿವರಿಸಿದರು.

Tags:
error: Content is protected !!