h c mahadevappa reaction on nikhil kumaraswamy statement
ಬೆಂಗಳೂರು : ಒಳ ಮಿಸಲಾತಿಯ ವಿಚಾರವಾಗಿ ಬಿಜೆಪಿ ನಾಯಕರು ಜನರನ್ನು ದಾರಿ ತಪ್ಪಿಸುವ ಮಾತುಗಳನ್ನಾಡುತ್ತಿದ್ದಾರೆ. ನ್ಯಾ.ನಾಗಮೋಹನ್ ದಾಸ್ ಅವರ ಆಯೋಗದ ವರದಿ ಸಲ್ಲಿಕೆಯಾದ 20 ದಿನಗಳಲ್ಲೇ ರಾಜ್ಯಸರ್ಕಾರ ಒಳಮೀಸಲಾತಿ ಜಾರಿ ಮಾಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1992 ರಲ್ಲಿ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಗಾಗಿ ನ್ಯಾಯಮೂರ್ತಿ ಸದಾಶಿವ ಆಯೋಗವನ್ನು ರಚನೆ ಮಾಡಿತ್ತು. ಅದರ ವರದಿ ಕೂಡ ಸಲ್ಲಿಕೆಯಾಗಿತ್ತು. ಆದರೆ ಬಿಜೆಪಿ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಿ ಮುಗಿದ ಅಧ್ಯಾಯ ಎಂದು ಹೇಳಿತ್ತು.
ಈಗ ಹೋರಾಟ ಮಾಡುವುದಾಗಿ ಹೇಳುತ್ತಿರುವ ಗೋವಿಂದ ಕಾರಜೋಳ ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಎ. ನಾರಾಯಣ ಸ್ವಾಮಿ ಕೇಂದ್ರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದರು. ಈ ಇಬ್ಬರ ಅಧಿಕಾರಾವಧಿಯಲ್ಲೇ ಒಳಮೀಸಲಾತಿ ಜಾರಿಯಾಗದೆ ಸದಾಶಿವ ಅಯೋಗ ವರದಿ ತಿರಸ್ಕಾರವಾಗಿತ್ತು ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಒಳಮೀಸಲಾತಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆ ಬಳಿಕ ಸರ್ವೋಚ್ಚ ನ್ಯಾಯಾಲಯ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ತೀರ್ಪು ನೀಡಿದೆ. ಆದನ್ನು ಆಧರಿಸಿ ಎಂಪ್ಯಾರಿಕಲ್ ಡಾಟಾ ಸಂಗ್ರಹಿಸಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಿದ್ದೇವೆ. ಆಯೋಗ ವರದಿ ಸಲ್ಲಿಸಿದ 15-20 ದಿನಗಳ ಒಳಗಾಗಿ ಒಳಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂದರು.
ಒಳಮೀಸಲಾತಿಯ ಬದ್ಧತೆಯನ್ನು ಚಿತ್ರದುರ್ಗದ ಸಮಾವೇಶದಲ್ಲೇ ಕಾಂಗ್ರೆಸ್ ಘೋಷಣೆ ಮಾಡಿದೆ. ಪಕ್ಷ ತನ್ನ ಮಾತಿಗೆ ಕಟಿಬದ್ಧವಾಗಿದೆ. ನುಡಿದಂತೆ ನಡೆಯುತ್ತಿದೆ. ನಾವು ಒಳಮೀಸಲಾತಿ ಜಾರಿ ಮಾಡುವ ಹಂತದಲ್ಲಿರುವಾಗ ಬಿಜೆಪಿಯವರು ಪ್ರತಿಭಟನೆ ನಡೆಸಲು ಮುಂದಾಗಿರುವುದು ರಾಜಕೀಯ ಕಾರಣಕ್ಕೆ. ಇದು ಜನರನ್ನು ಎತ್ತಿ ಕಟ್ಟುವ ದುರುದ್ದೇಶವಾಗಿದೆ ಎಂದು ಆರೋಪಿಸಿದರು.
ಬಿಜೆಪಿಯವರಿಗೆ ಪ್ರತಿಭಟನೆ ನಡೆಸುವ ನೈತಿಕ ಹಕ್ಕಿಲ್ಲ. ಈ ಹಿಂದೆ ವರದಿಯನ್ನು ತಿರಸ್ಕರಿಸಿದವರು, ಮೀಸಲಾತಿ ವಿರುದ್ಧವಾಗಿರುವವರಿಂದ ನಾವು ನೈತಿಕತೆ ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…