ಬೆಂಗಳೂರು : ಪರಿಶಿಷ್ಟ ಜಾತಿ ಒಳಮೀಸಲಾತಿಯಲ್ಲಿ ಅನ್ಯಾಯ ಆಗಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಿಳೆಯೊಬ್ಬರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಪ್ರೀಡಂಪಾರ್ಕ್ ನಲ್ಲಿ ಭೋವಿ, ಕೊರಚ, ಕೊರಮ, ಲಂಬಾಣಿ ಮುಂತಾದ ಸಮುದಾಯಗಳು ಪ್ರತಿಭಟನೆ ನಡೆಸುತ್ತಿದ್ದು, ನಾಗಮೋಹನ್ ದಾಸ್ ವರದಿಯ ಪ್ರಕಾರ, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ಹೀಗಾಗಿ ವೈಜ್ಞಾನಿಕ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿವೆ.
ಪ್ರತಿಭಟನೆ ವೇಳೆ ವೀಣಾ ಎಂಬ ಮಹಿಳೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅಲ್ಲಿದ್ದವರು ಅವರನ್ನ ರಕ್ಷಣೆ ಮಾಡಿದ್ದಾರೆ.





