ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ.
ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಿಸಲಾಗಿದೆ. ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಮಂಗಳವಾರ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ಸಂಘಟನಾ ಸಮಿತಿ ಜೊತೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಿದರು.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದ್ದು, ರಾಜಾಜಿನಗರದ ಲುಲುಮಾಲ್‍ನಲ್ಲಿ 11 ಸ್ಕಿನ್‍ಗಳಲ್ಲಿ ಚಿತ್ರೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ ಎಂದು ಹೇಳಿದರು.
ಇದನ್ನು ಓದಿ: ಕಾಂಗ್ರೆಸ್ ಹೈಕಮಾಂಡ್ ಯಾರು ಅನ್ನೋದೆ ಗೊತ್ತಿಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ. ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31, 2025 ಕಡೆಯ ದಿನಾಂಕವಾಗಿರುತ್ತದೆ. 17ನೇ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಜಾಜಿನಗರದ ಲುಲು ಮಾಲ್, ಜೊತೆಗೆ ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಚಲನಚಿತ್ರಗಳ ಪ್ರದರ್ಶನವಿರಲಿದೆ. ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನಗಳಿರಲಿವೆ ಎಂದರು.
ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶದ ಅತ್ಯುತ್ತಮ ಚಲನಚಿತ್ರಗಳು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ. ಕಾನ್ಸ್ (ಫ್ರಾನ್ಸ್), ಬರ್ಲಿನ್ (ಜರ್ಮನಿ, ವೆನಿಸ್ (ಇಟಲಿ), ಕಾರ್ಲೋವಿ ವೇರಿ (ಜೆಕ್ ರಿಪಬ್ಲಿಕ್, ಲೊಕಾರ್ನೂ (ಸ್ವಿಡ್ಜರ್ ಲ್ಯಾಂಡ್), ರಾಟರ್‍ಡ್ಯಾಮ್ (ನೆದರ್ ಲ್ಯಾಂಡ್), ಬೂಸಾನ್ (ದಕ್ಷಿಣ ಕೂರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಒಂದೇ ಕಡೆ ಸಿನಿಮಾ ಪ್ರಿಯರಿಗೆ ವೀಕ್ಷಿಸಲು ದೊರೆಯಲಿವೆ ಎಂದು ವಿವರಿಸಿದರು.
ಜೊತೆಗೆ ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶದ ಅತ್ಯುತ್ತಮ ಚಲನಚಿತ್ರಗಳು ಸಹ ನಮ್ಮ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.
2025-26 ನೇ ಸಾಲಿನ 17ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಏರ್ಪಡಿಸಲು ರೂ. 7 ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದೆ. ಸಮಾರೋಪ ಸಮಾರಂಭ ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ಹೇಳಿದರು.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…