ರಾಜ್ಯ

ಜನವರಿ.29ರಿಂದ ಫೆಬ್ರವರಿ.06ರವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ.

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಿಸಲಾಗಿದೆ. ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಮಂಗಳವಾರ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ಸಂಘಟನಾ ಸಮಿತಿ ಜೊತೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಿದರು.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದ್ದು, ರಾಜಾಜಿನಗರದ ಲುಲುಮಾಲ್‍ನಲ್ಲಿ 11 ಸ್ಕಿನ್‍ಗಳಲ್ಲಿ ಚಿತ್ರೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ ಎಂದು ಹೇಳಿದರು.

ಇದನ್ನು ಓದಿ: ಕಾಂಗ್ರೆಸ್‌ ಹೈಕಮಾಂಡ್‌ ಯಾರು ಅನ್ನೋದೆ ಗೊತ್ತಿಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ. ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31, 2025 ಕಡೆಯ ದಿನಾಂಕವಾಗಿರುತ್ತದೆ. 17ನೇ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಜಾಜಿನಗರದ ಲುಲು ಮಾಲ್, ಜೊತೆಗೆ ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಚಲನಚಿತ್ರಗಳ ಪ್ರದರ್ಶನವಿರಲಿದೆ. ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನಗಳಿರಲಿವೆ ಎಂದರು.

ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶದ ಅತ್ಯುತ್ತಮ ಚಲನಚಿತ್ರಗಳು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ. ಕಾನ್ಸ್ (ಫ್ರಾನ್ಸ್), ಬರ್ಲಿನ್ (ಜರ್ಮನಿ, ವೆನಿಸ್ (ಇಟಲಿ), ಕಾರ್ಲೋವಿ ವೇರಿ (ಜೆಕ್ ರಿಪಬ್ಲಿಕ್, ಲೊಕಾರ್ನೂ (ಸ್ವಿಡ್ಜರ್‌ ಲ್ಯಾಂಡ್‌), ರಾಟರ್‍ಡ್ಯಾಮ್ (ನೆದರ್ ಲ್ಯಾಂಡ್), ಬೂಸಾನ್ (ದಕ್ಷಿಣ ಕೂರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಒಂದೇ ಕಡೆ ಸಿನಿಮಾ ಪ್ರಿಯರಿಗೆ ವೀಕ್ಷಿಸಲು ದೊರೆಯಲಿವೆ ಎಂದು ವಿವರಿಸಿದರು.

ಜೊತೆಗೆ ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶದ ಅತ್ಯುತ್ತಮ ಚಲನಚಿತ್ರಗಳು ಸಹ ನಮ್ಮ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

2025-26 ನೇ ಸಾಲಿನ 17ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಏರ್ಪಡಿಸಲು ರೂ. 7 ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದೆ. ಸಮಾರೋಪ ಸಮಾರಂಭ ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

2 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

2 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

4 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

6 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

9 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

9 hours ago