ರಾಜ್ಯ

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು.

ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಕೃಷಿ ಇಲಾಖೆ ಸಮೃದ್ಧಿ ಸಭಾಂಗಣದಲ್ಲಿ ಆಯೋಜಿಸಿದ್ದ, ಉತ್ಪಾದನೋತ್ತರ ಕೃಷಿ- ರೈತರ ಸಬಲೀಕರಣ ಅಂತರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವರು, ಕಳೆದ ವರ್ಷ 2025ರಲ್ಲಿ ನಡೆದ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ಮೇಳದಲ್ಲಿ ಲಕ್ಷಾಂತರ ರೈತರು, ಸಾರ್ವಜನಿಕರು ಭಾಗವಹಿಸಿ ಮೇಳದ ಯಶಸ್ಸಿಗೆ ಕಾರಣರಾದರಲ್ಲದೆ ಯುವ ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಹಾಗೂ ಸಿರಿಧಾನ್ಯಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಅವಳವಡಿಸಿಕೊಳ್ಳಲು ಈ ಹಿಂದಿನ ಮೇಳಗಳು ಯಶಸ್ಸುಕಂಡಿವೆ ಎಂದು ತಿಳಿಸಿದರು..

ಈ ವರ್ಷ ನಮ್ಮ ಸರ್ಕಾರ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ದೇಶದಲ್ಲಿ ಪ್ರಥಮವಾಗಿ “ಉತ್ಪಾದನೋತ್ತರ ಕೃಷಿ-ರೈತರ ಸಬಲೀಕರಣ”( Agriculture Beyond Production-Farmers Empowerment) ಎಂಬ ಧ್ಯೇಯ ವಾಕ್ಯದೊಂದಿಗೆ ಅಂತರರಾಷ್ಟ್ರೀಯ ಕಾರ‍್ಯಕ್ರಮವನ್ನು ಇದೇ ಫೆಬ್ರವರಿ 6, 7 ಮತ್ತು 8 ರಂದು ಅರಮನೆ ಮೈದಾನದಲ್ಲಿ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು..

ಈ ಹಿಂದೆ ನಮ್ಮ ದೇಶ ಆಹಾರ ಪದಾರ್ಥಗಳನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿ ಇತ್ತು.. ಇಂದು ಬದಲಾದ ಸನ್ನಿವೇಶದಲ್ಲಿ ನಮ್ಮ ದೇಶ ಆಹಾರ ಉತ್ಪಾದನೆಯಲ್ಲಿ ಪ್ರಗತಿ ಸಾಧಿಸಿದ್ದು ಇತರೆ ರಾಷ್ಟ್ರಗಳಿಗೆ ರಫ್ತು ಮಾಡುತ್ತಿದ್ದೇವೆ.‌ ಹಾಗೇಯೇ ಅಕ್ಕಿ ಉತ್ಪಾದನೆಯಲ್ಲಿ ಚೀನಾ ದೇಶವನ್ನು ಹಿಂದಕ್ಕೆ ಹಾಕಿರುವುದಾಗಿ ಸಚಿವರು ತಿಳಿಸಿದರು‌‌..

ಇನ್ನು ಈ ಬಾರಿಯ ಅಂತರರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಕೃಷಿ ಪರಿಸರ ವಿಜ್ಞಾನ, ಹಾಗೂ ಬ್ರ‍್ಯಾಂಡಿಂಗ್ ಎಂಬ ಮೂರು ಉಪ ಧ್ಯೇಯಗಳೊಂದಿಗೆ ಕಾರ‍್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು..

ಉತ್ಪಾದನೆ ನಂತರ, ರೈತರಿಗೆ ನಿರಂತರ ಆದಾಯ ದೊರಕಿಸುವ ಸಲುವಾಗಿ ಕೃಷಿ ತ್ಯಾಜ್ಯಗಳ ಮರುಬಳಕೆ, ದೇಸಿ ತಳಿಗಳ ಸಂರಕ್ಷಣೆ, ಭೌಗೋಳಿಕ ಸೂಚ್ಯಾಂಕವಿರುವ ಉತ್ಪಾದನೆಗಳು(GI – Tag Products) ಬಳಸುವ ಬಗ್ಗೆ ನಮ್ಮ ಸರ್ಕಾರದಿಂದ ವ್ಯಾಪಕ ಪ್ರಚಾರ ಮಾಡಲಾಗುತ್ತಿದೆ. ಕೃಷಿ ಉತ್ಪಾದನೆ ನಂತರ ಮೌಲ್ಯವರ್ಧನೆಗೆ ಒತ್ತು ಕೊಡಲು ಈಗಾಗಲೇ ಸೆಕೆಂಡರಿ ಕೃಷಿ ನಿರ್ದೇಶನಾಲಯ ಸ್ಥಾಪಿಸಿದ್ದು, ಅದರ ಮೂಲಕ ರೈತರು ಕೃಷಿ ಸಂಸ್ಕರಣೆ ಮಾಡಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.‌

ಇಂದು ಈ ವಿಷಯಗಳ ಬಗ್ಗೆ ಚರ್ಚಿಸಲು ಜರ್ಮನಿ, ಅಮೆರಿಕಾ, ವಿಯಟ್ನಾಮ್, ಕಾಂಬೋಡಿಯ ಹಾಗೂ ನಮ್ಮ ದೇಶದ ವಿವಿಧ ಭಾಗಗಳಿಂದ ಬಂದ 35ಕ್ಕಿಂತ ಹೆಚ್ಚು ತಜ್ಞರು, ನಮ್ಮ ರಾಜ್ಯದಿಂದ ಬಂದ ರೈತರು ಎಲ್ಲರೂ ಈ ಚರ್ಚೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶ್ವಸಿಯಾಗಿ ಮಾಡುತ್ತೀರೆಂದು ಭಾವಿಸುತ್ತೇನೆ ಎಂದು ಹೇಳಿದರು..

ಕಾರ್ಯಕ್ರಮದಲ್ಲಿ ಹನ್ಸ್ ಜುರ್ಗೆನ್ ಕ್ಲೆನ್, GI-Z ಇಂಡಿಯ ಟೀಂ ಲೀಡರ್, ನರ್ಮಾತ ಶರ್ಮಾ GI- Z ಪ್ರಾಜೆಕ್ಟ್ ಮ್ಯಾನೆಜರ್,ಕೃಷಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತ ವೈ.ಎಸ್.ಪಾಟೀಲ್, ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಯು.ಪಿ.ಸಿಂಗ್, ಸೇರಿದಂತೆ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಗಣ್ಯರು ಭಾಗವಹಿಸಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

1 hour ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

1 hour ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

1 hour ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

1 hour ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

1 hour ago