ಬೆಂಗಳೂರು : ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿದೆ. ಪ್ರಕರಣದ ವಿಚಾರಣಾಧಿಕಾರಿಯಾಗಿ ಜಿಲ್ಲಾಧಿಕಾರಿ ಜಗದೀಶ್ ಅವರನ್ನು ನೇಮಕ ಮಾಡಿದೆ.
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್‌ಗಳ ಬಳಿ ಉಂಟಾದ ಕಾಲ್ತುಳಿತ ಹಾಗೂ ಮೃತಪಟ್ಟವರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮತ್ತು ಈ ಪ್ರಕರಣದಲ್ಲಿ ಲೋಪ ಉಂಟಾಗಿದ್ದಲ್ಲಿ ಉಂಟಾಗಿರಬಹುದಾದ ಲೋಪಗಳ ಕುರಿತು. ಈ ಲೋಪಕ್ಕೆ ಕಾರಣರಾದವರ ಬಗ್ಗೆ ಹಾಗೂ ನಿರ್ಲಕ್ಷ್ಯತೆಯಿಂದ ಉಂಟಾಗಿದೆಯೇ ಎಂಬ ಬಗ್ಗೆ ಸಮಗ್ರವಾಗಿ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಿ 15 ದಿನಗಳೊಳಗೆ ಮ್ಯಾಜಿಸ್ಪೀರೀಯಲ್ ವರದಿ ಸಲ್ಲಿಸಲು ಸರ್ಕಾರ ತನಿಖಾಧಿಕಾರಿಗೆ ಸೂಚನೆ ನೀಡಿದೆ.





