ರಾಜ್ಯ

ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ.

ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ನೀಡಲು 2001ರಲ್ಲಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿತು.

ಅದರಂತೆ 2001ರಿಂದ 2016ರ ವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅರ್ಹ ಪತ್ರಕರ್ತರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ.

2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅರ್ಹ ಪತ್ರಕರ್ತರಿಗೆ ಈ ಪ್ರಶಸ್ತಿಗಳನ್ನು ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

 ಪರಿಸರ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಅನುಪಮ ಕೊಡುಗೆ ನೀಡಿರುವ ಹಾಗೂ ಪತ್ರಿಕೋದ್ಯಮದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರುವ ಅರ್ಹ ಪತ್ರಕರ್ತರನ್ನು ಸಾರ್ವಜನಿಕರು, ಸಂಘ ಸಂಸ್ಥೆಗಳು ನಾಮನಿರ್ದೇಶನ ಮಾಡಬಹುದು ಅಥವಾ ವೈಯುಕ್ತಿಕವಾಗಿ ಸ್ವಯಂ ಅರ್ಜಿ ಸಲ್ಲಿಸಬಹುದು.

 2017 ರಿಂದ 2023 ರ ಅವಧಿಯ ಎರಡೂ ವಿಭಾಗಗಳ ಪ್ರಶಸ್ತಿಗಳಿಗೆ ತಲಾ 7 ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲಾಗುವುದು. ಈ ಪ್ರಶಸ್ತಿಯ ಮೊತ್ತ ಒಂದು ಲಕ್ಷ ರೂ. ನಗದು ಪುರಸ್ಕಾರ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಹೊಂದಿರುತ್ತದೆ.

ಅರ್ಜಿಗಳು / ನಾಮನಿರ್ದೇಶನಗಳನ್ನು ಮಾನ್ಯ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗವಾನ್ ಮಹಾವೀರ ರಸ್ತೆ, (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು 560001 ಇಲ್ಲಿಗೆ ಅಥವಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸ tsraward@gmail.com ಗೆ ಸೆಪ್ಟಂಬರ್ 30‌ ರ ಸಂಜೆ 5.00 ಗಂಟೆಯ ಒಳಗಾಗಿ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

4 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

4 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

5 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

5 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

5 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

5 hours ago