ರಾಜ್ಯ

“ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಅಹ್ವಾನ

ಬೆಂಗಳೂರು: ಹಿರಿಯ ಪತ್ರಕರ್ತ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ಅವರ ನೆನಪಿನಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಒಳಗೊಂಡಿದೆ.

“ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಹಾಗೂ ಸಾರ್ವಜನಿಕರು, ಸಂಘ – ಸಂಸ್ಥೆಗಳು ಅರ್ಹ ಪತ್ರಕರ್ತರನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದಾಗಿದೆ.

ವಡ್ಡರ್ಸೆ ರಘುರಾಮಶೆಟ್ಟಿ ಅವರ ಪರಿಚಯ

ಓದುಗರ ಸಂಪಾದಕ ಎಂದೇ ಹೆಸರಾಗಿದ್ದ ದಿ.ವಡ್ಡರ್ಸೆ ರಘುರಾಮ ಶೆಟ್ಟಿಯವರು. 1960ರ ದಶಕದಿಂದ ಸುಮಾರು ನಾಲ್ಕು ದಶಕಗಳ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ಮಹತ್ವದ ಸೇವೆಗೈದಿದ್ದಾರೆ. ಮಾಧ್ಯಮವು ವಾಣಿಜ್ಯೋದ್ಯಮಿಗಳ ಹಾಗೂ ಈ ರಂಗದ ಪರಿಚಯವಿಲ್ಲದವರ ಆಡುಂಬೊಲವಾಗಬಾರದು ಎಂಬ ಮಹತ್ವಾಕಾಂಕ್ಷೆ ಹೊಂದಿದ್ದರು. ಸಮಾಜದ ವಂಚನೆಯ ಜಾಲಗಳನ್ನು ಬಯಲಿಗೆಳೆಯುವ ಉದ್ದೇಶದಿಂದ 1984 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ “ಮುಂಗಾರು” ದಿನಪತ್ರಿಕೆಯನ್ನು ಪ್ರಾರಂಭಿಸಿ, ನಿರ್ಭೀತ ಬರಹಗಳ ಮೂಲಕ ಪತ್ರಿಕಾ ವೃತ್ತಿಯಲ್ಲಿ ಬದಲಾವಣೆಯನ್ನು ತಂದವರು. ಕನ್ನಡ ಪತ್ರಿಕೋದ್ಯಮದಲ್ಲಿ ದೀನದಲಿತರ ಹಾಗೂ ದುರ್ಬಲ ವರ್ಗದವರ ಪರವಾಗಿ ಧ್ವನಿಯೆತ್ತುವ, ದನಿಯಿಲ್ಲದವರ ದನಿಯಾಗಿದ್ದರು. ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತವನ್ನು ಉತ್ತೇಜಿಸಲು ಮತ್ತು ಸಾಮಾಜಿಕ ಬದಲಾವಣೆಯನ್ನು ತರಲು ಶ್ರಮಿಸಿದರು.

ಪ್ರಶಸ್ತಿಗೆ ಅರ್ಹತೆಗಳು

ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 15 ವರ್ಷ ಸೇವಾನುಭವ ಹೊಂದಿರಬೇಕು. ಹಿರಿಯರಿಗೆ ಆದ್ಯತೆ ನೀಡಲಾಗುವುದು. ಸಾಮಾಜಿಕ ನ್ಯಾಯದ ಕಾಳಜಿ ಹೊಂದಿರುವ 10 ರಿಂದ 15 ಲೇಖನಗಳು ಪ್ರಕಟವಾಗಿರಬೇಕು ಅಥವಾ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಈ ಕುರಿತು ವಿಶೇಷ ವರದಿ, ಚರ್ಚೆ, ಸಂವಾದ ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿರ್ಮಿಸಿರಬೇಕು.

ನಾಮನಿರ್ದೇಶನಗಳನ್ನು ಸಲ್ಲಿಸಲು 2024ನೇ ಅಕ್ಟೋಬರ್ 21 ಕೊನೆಯ ದಿನಾಂಕವಾಗಿರುತ್ತದೆ.
ನಾಮನಿರ್ದೇಶನಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗÀವಾನ್ ಮಹಾವೀರ ರಸ್ತೆ, (ಇನ್ ಫೆಂಟ್ರಿ ರಸ್ತೆ), ಬೆಂಗಳೂರು 560 001 ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ tsraward@gmail.com ಇ-ಮೇಲ್ ಮೂಲಕ ಸಲ್ಲಿಸಬಹುದಾಗಿದೆ. ಇತರೆ ಜಿಲ್ಲೆಗಳ ಪತ್ರಕರ್ತರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

6 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

9 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

10 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

10 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

10 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

10 hours ago