ಬೆಳಗಾವಿ: ಮಂಡ್ಯದಲ್ಲಿ ಡಿಸೆಂಬರ್.20 ರಿಂದ 22ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಚಲುವರಾಯಸ್ವಾಮಿ ಅವರು ಆಹ್ವಾನಿಸಿದರು.
ಬೆಳಗಾವಿಯ ಸುವರ್ಣಸೌಧದ ಸಿಎಂ ಹಾಗೂ ಉಪಮುಖ್ಯಮಂತ್ರಿ ಕಚೇರಿಯಲ್ಲಿ ಆಹ್ವಾನ ಪತ್ರಿಕೆ ನೀಡಿ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸುವಂತೆ ಆಹ್ವಾನ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕರುಗಳಾದ ರವಿಕುಮಾರ್ ಗಣಿಗ, ರಮೇಶ್ ಬಾಬು ಬಂಡಿಸಿದ್ದೇಗೌಡ, ವಿಧಾನಪರಿಷತ್ ಸದಸ್ಯರಾದ ಮಧು ಮಾದೇಗೌಡ, ಕನ್ನಡ ಸಾಹಿತ್ಯ ಷರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಇತರ ಗಣ್ಯರು ಭಾಗಿಯಾಗಿದ್ದರು.