ರಾಜ್ಯ

ದೆಹಲಿ ಕೆಂಪುಕೋಟೆ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಆರು ಮಂದಿ ಗ್ರಾ.ಪಂ ಅಧ್ಯಕ್ಷರಿಗೆ ಆಹ್ವಾನ

ಬೆಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿದ್ದಾರೆ.

ಇವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲುಕಿನ ಗೆದರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಕುಮಾರಿ ಲಕ್ಷ್ಮಿನರಸಮ್ಮ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪೆರುವಾಯಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಫೀಜಾ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಕಮತನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರಾಜೇಶ್ವರಿ ಗುತ್ತಿ, ಕಲಬುರಗಿ ಜಿಲ್ಲೆಯ ತಾಜ್ ಸುಲ್ತಾನಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಜಯಶ್ರೀ, ಕೊಡಗು ಜಿಲ್ಲೆ ಪೊನ್ನಂಪೇಟೆಯ ಕಾನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ದೇವಿ ಪಿ.ಟಿ ಮತ್ತು ಚಾಮರಾಜನಗರ ತಾಲ್ಲೂಕಿನ ಅಟ್ಟಗುಳಿಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿವಮ್ಮ ಅವರುಗಳು ನಾಳೆ ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿರುವ ವಿಶೇಷ ಆಹ್ವಾನಿತರಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ನೇತೃತ್ವದಲ್ಲಿ ಈ ತಂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದೆ.

ಈ ಆರೂ ಮಂದಿ ಉತ್ತಮ ಆಡಳಿತ, ಪರಿಸರ ಕಾಳಜಿ, ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ, ತೆರಿಗೆ ಸಂಗ್ರಹಣೆ, ನೀರು ಸರಬರಾಜು ಮುಂತಾದ ಸಾಮಾಜಿಕ ಜವಾಬ್ದಾರಿಗಳನ್ನು ಅತ್ಯಂತ ಬದ್ಧತಾಪೂರ್ವಕವಾಗಿ ನಿರ್ವಹಿಸಿ ಈ ಗೌರವಕ್ಕೆ ಪಾತ್ರರಾಗಿರುವುದು ಕರ್ನಾಟಕಕ್ಕೆ ಹೆಮ್ಮೆ ತಂದಿದೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

21 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

31 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

38 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

48 mins ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago